ಮೈಸೂರಿನಲ್ಲೂ ಬಂಡಾಯದ ಬಿಸಿ: 30 ವರ್ಷ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ; ರಾಮದಾಸ್

ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ.  ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.
ಎಸ್ ಎ ರಾಮದಾಸ್
ಎಸ್ ಎ ರಾಮದಾಸ್

ಮೈಸೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ.  ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.

ಟಿಕೆಟ್ ಕೈ ತಪ್ಪಿರುವುದು ರಾಮದಾಸ್​​ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.

ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com