ಕಾಂಗ್ರೆಸ್ ಸೇರಿದ ಶೆಟ್ಟರ್ ವಿರುದ್ಧ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಾಗ್ದಾಳಿ

ಬಿಜೆಪಿಯೊಂದಿಗಿನ 40 ವರ್ಷಗಳ ಒಡನಾಟವನ್ನು ಸೋಮವಾರ ಕೊನೆಗೊಳಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್ ವಿರುದ್ಧ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದರು.
ಅರವಿಂದ್ ಬೆಲ್ಲದ್
ಅರವಿಂದ್ ಬೆಲ್ಲದ್

ಧಾರವಾಡ: ಬಿಜೆಪಿಯೊಂದಿಗಿನ 40 ವರ್ಷಗಳ ಒಡನಾಟವನ್ನು ಸೋಮವಾರ ಕೊನೆಗೊಳಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್ ವಿರುದ್ಧ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದರು.

ಧಾರವಾಡದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಬೆಲ್ಲದ್ ಅವರು, ಶೆಟ್ಟರ್ ಅವರು ಉನ್ನತ ಹುದ್ದೆಯಲ್ಲಿದ್ದರೂ ಪಕ್ಷದ ಯಾವುದೇ ಕಿರಿಯ ಕಾರ್ಯಕರ್ತರ ಬೆಳವಣಿಗೆಗೆ ಸಹಾಯ ಮಾಡಿಲ್ಲ ಎಂದು ಆರೋಪಿಸಿದರು.

ಶೆಟ್ಟರ್ ಅವರು ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದರು. ಪಕ್ಷ ಕಟ್ಟುವಲ್ಲಿ ಹಲವು ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಅವರಿಗೆ ಎಲ್ಲ ಉನ್ನತ ಸ್ಥಾನಗಳನ್ನು ನೀಡಿದ ಪಕ್ಷ ನೀಡಿದೆ. ಇದೀಗೆ ಬೇರೆಯವರಿಗೆ ಅವಕಾಶ ನೀಡಲು ಬಯಸಿದೆ ಎಂದು ಹೇಳಿದರು.

ಬೃಹತ್ ಸಮಾವೇಶದೊಂದಿಗೆ ಇದೇ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಅಮೃತ್ ದೇಸಾಯಿ ಅವರು ಕೂಡ ನಾಮಪತ್ರ ಸಲ್ಲಿಸಿದರು. ಈ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com