ಎಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಆಯನೂರು ಮಂಜುನಾಥ್ ಸೇರ್ಪಡೆ
ಚಿತ್ರದುರ್ಗ: ಕರ್ನಾಟಕ ಬಿಜೆಪಿಗೆ ಭಾರಿ ಹಿನ್ನಡೆಯಾಗಿದ್ದು, ಹಿರಿಯ ನಾಯಕ ಮತ್ತು ಎಂಎಲ್‌ಸಿ ಆಯನೂರು ಮಂಜುನಾಥ್ ಬುಧವಾರ ಇಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡರು.
ಮುಖ್ಯವಾದ ವಿಚಾರವೆಂದರೆ, ಪಕ್ಷಕ್ಕೆ ಸೇರ್ಪಡೆಗೊಂಡ ಕೂಡಲೇ ಅವರನ್ನು ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹಿರಿಯ ಲಿಂಗಾಯತ ಮುಖಂಡರಾಗಿರುವ ಮಂಜುನಾಥ್ ಇಂದು ಬೆಳಗ್ಗೆ ಎಂಎಲ್‌ಸಿ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಗುರುವಾರ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದ್ದು, ಸದ್ಯ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಬಿಜೆಪಿ ಇನ್ನೂ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಕ್ಷೇತ್ರದಲ್ಲಿ ಇತ್ತೀಚೆಗಷ್ಟೇ ಭಜರಂಗದಳದ ಕಾರ್ಯಕರ್ತ ಹರ್ಷನ ಬರ್ಬರ ಹತ್ಯೆಯಾಗಿದ್ದು, ಹಿಂಸಾಚಾರದ ಘಟನೆಗಳಿಗೆ ಸಾಕ್ಷಿಯಾಗಿದೆ.
'ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಹುಬ್ಬಳ್ಳಿಗೆ ತೆರಳಿ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸುತ್ತೇನೆ. ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆಯನ್ನೂ ಸಲ್ಲಿಸುತ್ತೇನೆ' ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.
'ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ, ಟಿಕೆಟ್ ನಿರಾಕರಣೆಯಿಂದ ಪಕ್ಷ ಬಿಡುತ್ತಿಲ್ಲ. ನಗರದ ಬೆಳವಣಿಗೆಗೆ ಕೊಡುಗೆ ನೀಡಲು ಈ ನಿರ್ಧಾರ ಕೈಗೊಂಡಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ ಏಕೈಕ ವ್ಯಕ್ತಿ ನಾನೇ' ಎಂದು ಪ್ರತಿಪಾದಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ