ಕರ್ನಾಟಕ ವಿಧಾನಸಭೆ ಚುನಾವಣೆ: JDS ಗೆ BRS ಬೆಂಬಲ, ಕುಮಾರಸ್ವಾಮಿ ಪರ ಕೆಸಿಆರ್ ಪ್ರಚಾರ!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೆಡಿಎಸ್‌ಗೆ ಬೆಂಬಲ ನೀಡುತ್ತಿದ್ದು, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷ ಕಣದಲ್ಲಿರುವ ಕಾರಣ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ.
ಕುಮಾರಸ್ವಾಮಿ ಪರ ಕೆಸಿಆರ್ ಪ್ರಚಾರ
ಕುಮಾರಸ್ವಾಮಿ ಪರ ಕೆಸಿಆರ್ ಪ್ರಚಾರ
Updated on

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೆಡಿಎಸ್‌ಗೆ ಬೆಂಬಲ ನೀಡುತ್ತಿದ್ದು, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷ ಕಣದಲ್ಲಿರುವ ಕಾರಣ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ.

ಬಿಆರ್‌ಎಸ್, ಈ ಹಿಂದೆ ಟಿಆರ್‌ಎಸ್, ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲು ತನ್ನ ಹೆಸರನ್ನು ಮರುನಾಮಕರಣ ಮಾಡಿತ್ತು. ಅಲ್ಲದೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ಕೂಡ ವ್ಯಕ್ತಪಡಿಸಿತ್ತು. ಆದಾಗ್ಯೂ, ಜೆಡಿ (ಎಸ್) ತನ್ನ ಸ್ನೇಹಿತ ಮತ್ತು ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಕಷ್ಟು ಸಮಯದ ಕೊರತೆಯಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಅದು ನಿರ್ಧರಿಸಿದೆ ಎಂದು ಬಿಆರ್‌ಎಸ್ ಮೂಲಗಳು ಶುಕ್ರವಾರ ತಿಳಿಸಿವೆ.

ಸಾಕಷ್ಟು ಸಿದ್ಧತೆ ಮತ್ತು ಯೋಜನೆ ಇಲ್ಲದೆ ಚುನಾವಣೆ ಎದುರಿಸಲು ಪಕ್ಷವು ಒಲವು ಹೊಂದಿಲ್ಲ ಎಂದು ಮೂಲಗಳು ಹೇಳಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ನೆಲೆಯೂರಲು ಬಿಆರ್‌ಎಸ್ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಬಿಆರ್‌ಎಸ್ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇದುವರೆಗೆ ಮಹಾರಾಷ್ಟ್ರದ ನಾಂದೇಡ್ ಪ್ರದೇಶದಲ್ಲಿ ಎರಡು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಏಪ್ರಿಲ್ 24 ರಂದು ಛತ್ರಪತಿ ಸಂಭಾಜಿ ನಗರದಲ್ಲಿ (ಔರಂಗಾಬಾದ್) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಚಂದ್ರ ಶೇಖರ ರಾವ್ ಅವರು ಜೆಡಿ (ಎಸ್) ಅಭ್ಯರ್ಥಿಗಳು ಮನವಿ ಮಾಡಿದರೆ ಅವರನ್ನು ಬೆಂಬಲಿಸಿ ಪ್ರಚಾರ ಮಾಡುವ ಬಗ್ಗೆ ಯೋಚಿಸಬಹುದು ಎನ್ನಲಾಗಿದೆ. ಅಂತೆಯೇ ಬಿಆರ್ ಎಸ್ ಸ್ಪರ್ಧೆಯಿಂದ ಬಿಜೆಪಿ ವಿರೋಧಿ ಮತಗಳ ವಿಭಜನೆಯ ನಂತರ ಕರ್ನಾಟಕದಲ್ಲಿ ಬಿಜೆಪಿಗೆ ತನ್ನ ಪ್ರಚಾರ ಲಾಭವಾಗಬಹುದು ಎಂಬ ಅಭಿಪ್ರಾಯದ ಬಗ್ಗೆ ಬಿಆರ್‌ಎಸ್ ಕಳವಳ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಈ ಹಿಂದೆ ಹೈದರಾಬಾದ್‌ನಲ್ಲಿ ಟಿಆರ್‌ಎಸ್ ಹೆಸರನ್ನು ಬಿಆರ್‌ಎಸ್ ಎಂದು ಬದಲಾಯಿಸುವ ಕಾರ್ಯಕ್ರಮಗಳಿಗೆ ಹಾಜರಾಗಿದ್ದರು. ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಗುರುವಾರ ಅಂತ್ಯಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com