ವಿಧಾನಸಭೆ ಚುನಾವಣೆ: ಒಟ್ಟು 4,989 ನಾಮಪತ್ರಗಳು ಕ್ರಮಬದ್ಧ, 5 ಕ್ಷೇತ್ರಗಳ ಪರಿಶೀಲನೆ ಬಾಕಿ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಶುಕ್ರವಾರ ಪರಿಶೀಲನೆಯ ಬಳಿಕ 4989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ...
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಶುಕ್ರವಾರ ಪರಿಶೀಲನೆಯ ಬಳಿಕ 4989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯಾದ್ಯಂತ ಒಟ್ಟು 3632 ಅಭ್ಯರ್ಥಿಗಳು 5 ಸಾವಿರಕ್ಕೂ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದ್ದು, ಈ ಪೈಕಿ 500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. ಒಟ್ಟು 3,044 ಅಭ್ಯರ್ಥಿಗಳ 4,989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಆಯೋಗ ಹೇಳಿದೆ.

ಐದು ವಿಧಾನಸಭಾ ಕ್ಷೇತ್ರಗಳಾದ ಸವದತ್ತಿ,‌ ಔರಾದ್, ಹಾವೇರಿ, ರಾಯಚೂರು ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಮಾತ್ರ ಬಾಕಿ ಇದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದ್ದು, ಆ ಬಳಿಕ ಸ್ಪರ್ಧಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸಂಖ್ಯೆ ತಿಳಿಯಲಿದೆ.

ನಾಮಪತ್ರಗಳ ವಿವರ
ಒಟ್ಟು 224 ಕ್ಷೇತ್ರಗಳಲ್ಲಿ ಒಟ್ಟು 4989 ನಾಮಪತ್ರಗಳು ಕ್ರಮಬದ್ಧ
ಬಿಜೆಪಿಯ- 219
ಕಾಂಗ್ರೆಸ್ ನ -218
ಜೆಡಿಎಸ್ ನ -207
ಎಎಪಿಯ- 207
ಬಿಎಸ್ಪಿ – 135
ಸಿಪಿಎಂ -4
ಪಕ್ಷೇತರರು -1334
ನೋಂದಾಯಿತ, ಮಾನ್ಯತೆ ರಹಿತ ಪಕ್ಷಗಳು- 720
ಕಣದಲ್ಲಿ 3044 ಅಭ್ಯರ್ಥಿಗಳು
ನೋಂದಾಯಿತ, ಮಾನ್ಯತೆ ರಹಿತ ಪಕ್ಷಗಳು 720

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com