ತಡವಾಗಿದೆ, ಬಿಜೆಪಿಗಾಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಎಸ್'ವೈಗೆ ಸಾಧ್ಯವಿಲ್ಲ: ಡಿಕೆ.ಶಿವಕುಮಾರ್

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನಿಸುತ್ತಿದ್ದು, ಈ ನಡುವಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡುವೆ ಮಾತಿನ ಸಮರ ಶುರುವಾಗಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನಿಸುತ್ತಿದ್ದು, ಈ ನಡುವಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡುವೆ ಮಾತಿನ ಸಮರ ಶುರುವಾಗಿದೆ.

ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಮುಖಂಡರ ಸಭೆ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಈಗಾಗಲೇ ತಡವಾಗಿದೆ. ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಡ್ಯಾಮೇಜ್ ಕಂಟ್ರೋಲ್ ಮಾಡಲು ಯಡಿಯೂರಪ್ಪ ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಒಮ್ಮೆ ಅಣೆಕಟ್ಟು ಒಡೆದರೆ ನೀರು ನಿಲ್ಲಿಸಲು ಸಾಧ್ಯವಿಲ್ಲ, ಹೊಸದಾಗಿ ನಿರ್ಮಿಸಬೇಕು, ಈ ನೀರು ಸಮುದ್ರ ಸೇರಬೇಕು, ಎಲ್ಲರೂ ಬಂದು ಈಗ ಕಾಂಗ್ರೆಸ್ ಎಂಬ ಸಮುದ್ರ ಸೇರಬೇಕು ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಂತಹ ಅನುಭವಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಂತೆ ವೀರಶೈವ-ಲಿಂಗಾಯತ ಮುಖಂಡರು ಶೀಘ್ರಗತಿಯಲ್ಲಿ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಬೇಕೆಂದು ಹೇಳಿದರು.

ಡಿಕೆ.ಶಿವಕುಮಾರ್ ಅವರ ಈ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ ಬೊಮ್ಮಾಯಿಯವರು, ಲಿಂಗಾಯತ ಸಮುದಾಯವನ್ನು ವಿಭಜಿಸುವ ಷಡ್ಯಂತ್ರವಿರುವುದನ್ನು ಈ ಹೇಳಿಕೆಯಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಡಿಕೆ.ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು     ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13 ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com