ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದುರನ್ನು ಕ್ಷೇತ್ರದತ್ತ ಕರೆತಂದ ಸೋಮಣ್ಣ: ಬಿಜೆಪಿ ಪ್ರಚಾರ ತಂತ್ರ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.

ಸೋಮಣ್ಣ ಮತ್ತು ಬಿಜೆಪಿಯ ತೀವ್ರ ಪ್ರಚಾರದಿಂದಾಗಿ ಸಿದ್ದರಾಮಯ್ಯ ಅವರು ಶನಿವಾರ ತಮ್ಮ ಕ್ಷೇತ್ರಕ್ಕೆ ಧಾವಿಸುವಂತೆ ಮಾಡಿದೆ.

ಈ ಹಿಂದೆ ವರುಣಾದಲ್ಲಿ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ಇದೀಗ ಶನಿವಾರ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕ್ಷೇತ್ರಕ್ಕೆ ಆಗಮಿಸಿ ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಇಡೀ ದಿನ ಕ್ಷೇತ್ರದಲ್ಲಿ ಇರಲಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಒಗ್ಗಟ್ಟಿನ ಹೋರಾಟ ನಡೆಸುತ್ತಿದೆ. ಕ್ಷೇತ್ರದಲ್ಲಿ ಜನಪ್ರಿಯರಾಗಿರುವ ವಿಜಯೇಂದ್ರ ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕೂಡ ವರುಣಾದಲ್ಲಿ ಸೋಮಣ್ಣ ಪರ ಪ್ರಚಾರ ನಡೆಸಿದ್ದಾರೆ.

ಬಿಜೆಪಿಯು ಪ್ರತಿಷ್ಠಿತ ಕ್ಷೇತ್ರವನ್ನು ಗೆಲ್ಲಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ರಣತಂತ್ರ ರೂಪಿಸುತ್ತಿದ್ದಾರೆ.

ಬಿಜೆಪಿಯ ಆಕ್ರಮಣಕಾರಿ ಪ್ರಚಾರದ ಬಗ್ಗೆ ಸಿದ್ದರಾಮಯ್ಯ ಅವರು ಚಿಂತಿತರಾಗಿದ್ದಾರೆ ಮತ್ತು ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಮೂಲಗಳು ವಿವರಿಸಿವೆ.

ಮುಖ್ಯಮಂತ್ರಿ ಹುದ್ದೆಗೆ ಹಪಹಪಿಸುತ್ತಿರುವ ಸಿದ್ದರಾಮಯ್ಯ ಅವರ ಸೋಲನ್ನು ಅವರದೇ ಪಕ್ಷದ ನಾಯಕರೇ ಖಚಿತಪಡಿಸಿಕೊಳ್ಳಲು ಷಡ್ಯಂತ್ರಗಳು ನಡೆಯುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com