ಅಧಿಕಾರಕ್ಕೆ ಬಂದಿದ್ದೇ ಆದರೆ, ಕೆಆರ್‌ಪಿಪಿಯಿಂದ ಸಕಾರಾತ್ಮಕ ಬದಲಾವಣೆ: ಗಾಲಿ ಜನಾರ್ಧನ ರೆಡ್ಡಿ

ಹಿಂದಿನ ಹಾಗೂ ಈಗಿನ ಸರ್ಕಾರಗಳ ಒಂದೇ ರೀತಿಯ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದು, ಸಕಾರಾತ್ಮಕ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆಂದು ಎಂದು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಶುಕ್ರವಾರ ಹೇಳಿದರು.
ಅಥಣಿಯಲ್ಲಿ ಗುರುವಾರ ಕೆಆರ್‌ಪಿಪಿ ಅಭ್ಯರ್ಥಿ ಬಸವರಾಜ ಬೆಸನಕೋಪ ಅವರ ಪರ ಪ್ರಚಾರ ನಡೆಸುತ್ತಿರುವ ಜನಾರ್ಧನ ರೆಡ್ಡಿ.
ಅಥಣಿಯಲ್ಲಿ ಗುರುವಾರ ಕೆಆರ್‌ಪಿಪಿ ಅಭ್ಯರ್ಥಿ ಬಸವರಾಜ ಬೆಸನಕೋಪ ಅವರ ಪರ ಪ್ರಚಾರ ನಡೆಸುತ್ತಿರುವ ಜನಾರ್ಧನ ರೆಡ್ಡಿ.

ಬೆಳಗಾವಿ: ಹಿಂದಿನ ಹಾಗೂ ಈಗಿನ ಸರ್ಕಾರಗಳ ಒಂದೇ ರೀತಿಯ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದು, ಸಕಾರಾತ್ಮಕ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆಂದು ಎಂದು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಶುಕ್ರವಾರ ಹೇಳಿದರು.

ಅಥಣಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಕೆಆರ್‌ಪಿಪಿ ಪಕ್ಷ ಅಭ್ಯರ್ಥಿ ಬಸವರಾಜ ಬೆಸನಕೋಪ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಜನಾರ್ಧನ ರೆಡ್ಡಿಯವರು ಅಥಣಿಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕಕ್ಕೆ ಕೆ.ಆರ್.ಪಿ.ಪಿ ಒತ್ತು ನೀಡುತ್ತಿದೆ. ಶಿಕ್ಷಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಪಕ್ಷದ ಪ್ರಮುಖ ಆದ್ಯತೆಗಳಾಗಿವೆ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಾದ್ಯಂತ ಕನಿಷ್ಠ 25 ಸ್ಥಾನಗಳನ್ನು ಕೆಆರ್‌ಪಿಪಿ ಗೆಲ್ಲಲಿದೆ. ಚುನಾವಣೆಯಲ್ಲಿ ಕೆ.ಆರ್.ಪಿ.ಪಿ.ಯಡಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆಂದು ತಿಳಿಸಿದರು.

ಜನರ ಕಲ್ಯಾಣಕ್ಕಾಗಿ ಪೊಲೀಸ್ ಇಲಾಖೆಯಲ್ಲಿನ ಇನ್ಸ್‌ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದವರಲ್ಲಿ ಬೆಸನಕೋಪ ಕೂಡ ಒಬ್ಬರಾಗಿದ್ದಾರೆ. ಈ ಮೂಲಕ ಹಲವು ಯುವಕರಿಗೆ ಅವರು ಮಾದರಿಯಾಗಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com