ದಕ್ಷಿಣ ಕರ್ನಾಟಕದಲ್ಲಿ ಗೆಲ್ಲಲು ಕೇಸರಿ ಪಾಳಯ ಕಸರತ್ತು; ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ

ಕರ್ನಾಟಕದ ದಕ್ಷಿಣ ಪ್ರದೇಶವು ಯಾವಾಗಲೂ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪೈಪೋಟಿಯ ತಾಣವೆಂದೇ ಬಿಂಬಿತವಾಗಿದೆ. ಜೆಡಿಎಸ್ ತನ್ನ ಪ್ರಮುಖ ಶಕ್ತಿಯನ್ನು ಈ ಪ್ರದೇಶದಿಂದ ಪಡೆದುಕೊಂಡಿದ್ದು, ಕಾಂಗ್ರೆಸ್‌ಗೆ ತೀವ್ರ ಪೈಪೋಟಿ ನೀಡುತ್ತಿದೆ. ಇದೀಗ ಬಿಜೆಪಿಯು ಪೈಪೋಟಿಗೆ ಮುಂದಾಗಿದೆ.
ಬಿಜೆಪಿ-ಜೆಡಿಎಸ್-ಕಾಂಗ್ರೆಸ್
ಬಿಜೆಪಿ-ಜೆಡಿಎಸ್-ಕಾಂಗ್ರೆಸ್

ಬೆಂಗಳೂರು: ಕರ್ನಾಟಕದ ದಕ್ಷಿಣ ಪ್ರದೇಶವು ಯಾವಾಗಲೂ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪೈಪೋಟಿಯ ತಾಣವೆಂದೇ ಬಿಂಬಿತವಾಗಿದೆ. ಜೆಡಿಎಸ್ ತನ್ನ ಪ್ರಮುಖ ಶಕ್ತಿಯನ್ನು ಈ ಪ್ರದೇಶದಿಂದ ಪಡೆದುಕೊಂಡಿದ್ದು, ಕಾಂಗ್ರೆಸ್‌ಗೆ ತೀವ್ರ ಪೈಪೋಟಿ ನೀಡುತ್ತಿದೆ. ಇದೀಗ ಬಿಜೆಪಿಯು ಪೈಪೋಟಿಗೆ ಮುಂದಾಗಿದೆ.

ಬಿಜೆಪಿಯು ಈ ಪ್ರದೇಶದತ್ತ ಗಮನ ಹರಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಖಾಡಕ್ಕೆ ಧುಮುಕಿದ್ದಾರೆ. ಈ ಭಾಗದಲ್ಲೇ ಗೆದ್ದೇ ತೀರುವ ಕನಸನ್ನು ಹೊತ್ತು ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಹೀಗಾಗಿ, ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಬೆಂಗಳೂರು ನಗರದಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಪ್ರದೇಶದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಹಾಸನ ಮತ್ತು ಮಂಡ್ಯದಂತಹ ಜಿಲ್ಲೆಗಳಲ್ಲಿ ಜೆಡಿಎಸ್ ಎಲ್ಲಾ ಸ್ಥಾನಗಳನ್ನು ಸ್ವೀಪ್ ಮಾಡುತ್ತಿದ್ದು, ಬಿಜೆಪಿ ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. 

ಮತ್ತೊಂದೆಡೆ, ಈ ಪ್ರದೇಶದಲ್ಲಿ ಕಾಂಗ್ರೆಸ್ ಕೂಡ ಅಷ್ಟೇ ಬಲಿಷ್ಠವಾಗಿದೆ. ಸದ್ಯ, ಬೆಂಗಳೂರು ನಗರ ಸೇರಿದಂತೆ ಈ ಪ್ರದೇಶದಿಂದ ಪಕ್ಷದ 32 ಶಾಸಕರು ಗೆದ್ದು ಬಂದಿದ್ದಾರೆ.

ದಕ್ಷಿಣ ಕರ್ನಾಟಕ ಪ್ರದೇಶವು ಬೆಂಗಳೂರು ನಗರವನ್ನು ಹೊರತುಪಡಿಸಿ ಮೈಸೂರು, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳನ್ನು ಒಳಗೊಂಡಿದೆ. ಈ ಪ್ರದೇಶವು 86 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ ಮತ್ತು ಬೆಂಗಳೂರು ನಗರದಲ್ಲಿಯೇ 28 ಸ್ಥಾನಗಳಿವೆ.

ಕಳೆದ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 15 ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, 'ಆಪರೇಷನ್ ಕಮಲ'ದಿಂದಾಗಿ ಜೆಡಿಎಸ್ ಒಂದು ಸ್ಥಾನವನ್ನು ಕಳೆದುಕೊಂಡಿತು. ಈ ಬಾರಿ ಕಾಂಗ್ರೆಸ್ 18 ಸ್ಥಾನಗಳನ್ನು ಗೆಲ್ಲಲು ಬಯಸಿದ್ದು, ಬಿಜೆಪಿ ತನ್ನ ಸಂಖ್ಯೆಯನ್ನು 20ಕ್ಕೆ ಹೆಚ್ಚಿಸಿಕೊಳ್ಳಲು ಬಯಸಿದೆ. ಬೆಂಗಳೂರಿನಲ್ಲೇ ಆರಕ್ಕೂ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗುರಿಯಾಗಿಸಿಕೊಂಡಿದೆ.

ಬೆಂಗಳೂರು ಹೊರತುಪಡಿಸಿ ಈ ಭಾಗದ ಇತರೆ ಜಿಲ್ಲೆಗಳಲ್ಲಿ ಜೆಡಿಎಸ್ 24, ಬಿಜೆಪಿ 14 ಮತ್ತು ಕಾಂಗ್ರೆಸ್ 20 ಸ್ಥಾನಗಳನ್ನು ಪಡೆದುಕೊಂಡಿದೆ. ಮಂಡ್ಯದ ಎಲ್ಲಾ ಏಳು ಸ್ಥಾನಗಳನ್ನು ಜೆಡಿಎಸ್ ಗೆದ್ದಿದ್ದರೂ, ಕೆ.ಆರ್. ಪೇಟೆ ಕ್ಷೇತ್ರಕ್ಕೆ ‘ಆಪರೇಷನ್ ಕಮಲ’ದಿಂದಾಗಿ ಉಪಚುನಾವಣೆ ನಡೆದಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ನಾಲ್ಕರಲ್ಲಿ ಒಂದೂ ಸ್ಥಾನ ಗೆಲ್ಲದ ಬಿಜೆಪಿ, ಈ ಬಾರಿ ನಾಲ್ಕೂ ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಕನಕಪುರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ಒಕ್ಕಲಿಗ ಸಮುದಾಯದ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಉದ್ಘಾಟಿಸಿದೆ. ಇದು ಸಮೃದ್ಧಿಯ ಪ್ರತಿಮೆ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಮೆಗಾ ರ್ಯಾಲಿ ನಡೆಸಿದ್ದಾರೆ. ಒಕ್ಕಲಿಗರು ಈ ಪ್ರದೇಶದಲ್ಲಿ ಪ್ರಮುಖ ಮತ್ತು ಪ್ರಭಾವಶಾಲಿ ಪಾತ್ರವನ್ನು ವಹಿಸುತ್ತಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರ 108 ಅಡಿ ಎತ್ತರದ ಮಲೆ ಮಹದೇಶ್ವರ ಮೂರ್ತಿಯನ್ನು ಲೋಕಾರ್ಪಣೆ ಮಾಡಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಮತ್ತು ಮಂಡ್ಯದಲ್ಲಿ ಅಮಿತ್ ಶಾ ಅವರು ಮೆಗಾ ಡೈರಿಯನ್ನು ಉದ್ಘಾಟಿಸಿದರು. ಇದೆಲ್ಲವನ್ನು ಒಕ್ಕಲಿಗರನ್ನು ಗಮನದಲ್ಲಿಟ್ಟುಕೊಂಡೇ ಬಿಜೆಪಿ ಮಾಡಿದೆ ಎನ್ನಲಾಗಿದೆ.

‘ಆಪರೇಷನ್ ಕಮಲ’ದ ಮೂಲಕ ಒಕ್ಕಲಿಗ ನಾಯಕರಾದ ಆರೋಗ್ಯ ಸಚಿವ ಕೆ. ಸುಧಾಕರ್, ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರನ್ನು ಪಕ್ಷಕ್ಕೆ ಕರಂತಂದಿದ್ದು, ಕಂದಾಯ ಸಚಿವ ಆರ್. ಅಶೋಕ ಮತ್ತು ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ್ ಬಿಜೆಪಿಯಲ್ಲಿರುವ ಮೂಲ ಬಿಜೆಪಿ ನಾಯಕರಾಗಿದ್ದಾರೆ.

ಕಾಂಗ್ರೆಸ್ ಡಿ.ಕೆ. ಶಿವಕುಮಾರ್ ಒಕ್ಕಲಿಗ ಸಮುದಾಯದವರಾಗಿದ್ದು, ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಈಗಾಗಲೇ ಅವಕಾಶ ನೀಡಿರುವಂತೆ, ತಮಗೂ ಈ ಬಾರಿ ಅವಕಾಶ ನೀಡುವಂತೆ ಸಮುದಾಯದವರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ನಗರಕ್ಕೆ ನೀರು ಹರಿಸಲು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಮೇಕೆದಾಟು ಯೋಜನೆ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು ಎಂದು ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು.

ಮತ್ತೊಂದೆಡೆ ರಾಷ್ಟ್ರೀಯ ಪಕ್ಷಗಳ ಬಂಡಾಯ ಮತ್ತು ಪಕ್ಷಾಂತರದ ನಂತರ ಜೆಡಿಎಸ್ ವಿಶ್ವಾಸದಿಂದ ಕೂಡಿದೆ ಮತ್ತು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ. ಮಾಜಿ ಪ್ರಧಾನಿ ದೇವೇಗೌಡರು ತಮ್ಮ 89ರ ಹರೆಯದಲ್ಲೂ ಜೆಡಿಎಸ್ ಅನ್ನು ಅಧಿಕಾರಕ್ಕೆ ತರುವುದಾಗಿ ಪ್ರಚಾರ ಮಾಡುತ್ತಿದ್ದಾರೆ.

ದಕ್ಷಿಣ ಕರ್ನಾಟಕದಲ್ಲಿ ಗೆಲುವಿನ ಹಾದಿ ಬಿಜೆಪಿಗೆ ಕಠಿಣವಾಗಿದೆ. ಬಿಜೆಪಿಗೆ ಈ ಭಾಗದಲ್ಲಿ ಚುನಾವಣಾ ಚಿತ್ರಣ ಇನ್ನೂ ಕೆಟ್ಟದಾಗಿ ಕಾಣಿಸುತ್ತಿದೆ. ಪ್ರಧಾನಿ ಮೋದಿ ಬಂದಾಗ ಕೇಸರಿ ಪಕ್ಷವು ಸಾಕಷ್ಟು ಸದ್ದು ಮಾಡಿತು ಆದರೆ, ನಂತರ ಅದು ಕಡಿಮೆಯಾಗಿದೆ ಎಂದು ಹಿರಿಯ ಪತ್ರಕರ್ತೆ ಆಶಾ ಕೃಷ್ಣಸ್ವಾಮಿ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಮಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಲ್ಲ ಮತ್ತು ಜನರ ನಾಡಿಮಿಡಿತ ತಿಳಿದಿಲ್ಲ. ಆಡಳಿತ ಪಕ್ಷವನ್ನು ಮತದಾರರು ಹೇಗೆ ಗ್ರಹಿಸುತ್ತಾರೋ ಗೊತ್ತಿಲ್ಲ. ಬೆಂಗಳೂರಿನಲ್ಲಿ ಮೂಲಸೌಕರ್ಯ ಕುಸಿತವಾಗಿದ್ದು, ಬೆಂಗಳೂರು ಉಸ್ತುವಾರಿ ಸಚಿವರು ಯಾರೆಂದು ಜನರಿಗೆ ತಿಳಿದಿಲ್ಲ. ಕನಕಪುರದಂತಹ ಹಲವು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಕ್ರೀಯಾಶೀಲರಾಗಿಡಲು ಮುಂದಾಗಿದ್ದಾರೆ. ಕನಕಪುರದಲ್ಲಿ ಶೇ 3ರಷ್ಟು ಮತ ಪಡೆದಿದ್ದಾರೆ ಎಂದು ಕೃಷ್ಣಸ್ವಾಮಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com