ಶಿವಮೊಗ್ಗ ಕ್ಷೇತ್ರ: ಈಶ್ವರಪ್ಪಗೆ ಟಿಕೆಟ್ ನಿರಾಕರಿಸುವ ಮೂಲಕ ತೀವ್ರ ಹಣಾಹಣಿ ಕ್ಷೇತ್ರವನ್ನಾಗಿ ಮಾಡಿದ ಬಿಜೆಪಿ!

ಸರಣಿ ಕೋಮು ಸಂಘರ್ಷ ಘಟನೆಗಳಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಶಿವಮೊಗ್ಗ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದೆ.
ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ
Updated on

ಶಿವಮೊಗ್ಗ: ಸರಣಿ ಕೋಮು ಸಂಘರ್ಷ ಘಟನೆಗಳಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಶಿವಮೊಗ್ಗ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದೆ.

ಮತ್ತೊಂದೆಡೆ, ಹಿರಿಯರನ್ನು ಬದಿಗೊತ್ತಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಯುವ ನಾಯಕನಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿಜೆಪಿ ಹಿಂದುತ್ವದ ಅಜೆಂಡಾದೊಂದಿಗೆ ಮತ ಯಾಚಿಸುತ್ತಿದ್ದರೆ, ಕಾಂಗ್ರೆಸ್ ಶಾಂತಿಯುತ ಶಿವಮೊಗ್ಗಕ್ಕಾಗಿ ಮತ ಕೇಳುತ್ತಿದೆ.

ಕಳೆದ ವರ್ಷ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬುವವರ ಬರ್ಬರ ಹತ್ಯೆಯ ಆತಂಕಕಾರಿ ಘಟನೆಯು ಬಿಗುವಿನ ವಾತಾವರಣಕ್ಕೆ ಕಾರಣವಾಗಿತ್ತು ಮತ್ತು ಎಂಟು ದಿನಗಳಿಗೂ ಹೆಚ್ಚು ಕಾಲ ನಗರದಲ್ಲಿ ಕರ್ಫ್ಯೂ ಇತ್ತು. ಸಹಜ ಸ್ಥಿತಿಗೆ ಮರಳಿದ ನಂತರವೂ ಚೂರಿ ಇರಿತದ ಘಟನೆಗಳು ನಡೆದವು. ಕಳೆದ ವರ್ಷ ಭಾರತದ ಸ್ವಾತಂತ್ರ್ಯದ 75 ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ವೀರ್ ಸಾವರ್ಕರ್ ಅವರ ಫ್ಲೆಕ್ಸ್‌ಗಳನ್ನು ಅಳವಡಿಸುವ ವಿವಾದದ ನಂತರ ಹಿಂದೂ ಕಾರ್ಯಕರ್ತರಿಗೆ ಮತ್ತೆ ಚಾಕು ಇರಿತವಾಗಿತ್ತು.

ಶಿವಮೊಗ್ಗ ಕ್ಷೇತ್ರ ಶಿವಮೊಗ್ಗ ನಗರ ಪಾಲಿಕೆಯ ವ್ಯಾಪ್ತಿಗೆ ಬರುವ ಪ್ರದೇಶಗಳನ್ನು ಒಳಗೊಂಡಿದೆ. ಈ ಕ್ಷೇತ್ರದಲ್ಲಿ 2,56,373 ಮತದಾರರಿದ್ದು, 62,000 ಮುಸ್ಲಿಂ ಮತದಾರರು, 50,000 ಪರಿಶಿಷ್ಟ ಚಾತಿ, ಪಂಗಡ  ಲಿಂಗಾಯತರು (40,000), ಬ್ರಾಹ್ಮಣರು (30,000), ಕುರುಬ (20,000) ಮತ್ತು ಒಕ್ಕಲಿಗರು 15,000 ಮತಗಳನ್ನು ಹೊಂದಿದ್ದಾರೆ.

ಈ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಈಶ್ವರಪ್ಪ ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ನಗರಸಭೆ ಸದಸ್ಯ ಚನ್ನಬಸಪ್ಪ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಟಿಕೆಟ್ ತಪ್ಪಿದ್ದರಿಂದ  ಬಿಜೆಪಿಯ ಮಾಜಿ ನಾಯಕ ಆಯನೂರು ಮಂಜುನಾಥ್, ಕಾಂಗ್ರೆಸ್ ನಿಂದ ಹೆಚ್ ಸಿ. ಯೋಗೇಶ್ ಕಣದಲ್ಲಿದ್ದಾರೆ.  ಮಂಜುನಾಥ್ ಮತ್ತು ಚನ್ನಬಸಪ್ಪ ನಡುವೆ ನೇರ ಹಣಾಹಣಿ ಕಂಡುಬಂದರೂ, ಸ್ಥಳೀಯರ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಬಹುದು ಎನ್ನುತ್ತಾರೆ.

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ನಾಲ್ಕು ದಶಕಗಳಿಂದ ಪಕ್ಷದ ಬದ್ಧತೆಯ ಕಾರ್ಯಕರ್ತರಾಗಿದ್ದಾರೆ. ಅವರ ಇಡೀ ಕುಟುಂಬ ಪಕ್ಷ ಮತ್ತು ಸಿದ್ಧಾಂತಕ್ಕೆ ಸಮರ್ಪಿತವಾಗಿದೆ. ರಾಷ್ಟ್ರೀಯತೆಯ ಸಿದ್ಧಾಂತವು ಮುಸ್ಲಿಮರ ವಿರುದ್ಧ ಅಲ್ಲ, ಅದು ಯಾರನ್ನೂ ಓಲೈಸುವ ಉದ್ದೇಶದಿಂದಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. 

ಶಾಂತಿಯುತ ಶಿವಮೊಗ್ಗ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಶ್ರಮಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ ಒತ್ತಿ ಹೇಳಿದರು. ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಮತಗಳು ಯಾರಿಗೆ ಸಿಗುತ್ತದೆ ಎಂಬುದು ಕುತೂಹಲಕಾರಿಯಾಗಿದೆ. ಮುಸ್ಲಿಂ ಮತಗಳು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಿಭಜನೆಯಾದರೆ ಬಿಜೆಪಿ ಗೆಲುವು ಸುಲಭವಾಗಲಿದೆ. ಇಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಹಣಾಹಣಿ ಏರ್ಪಡಲಿದೆ ಎನ್ನುತ್ತಾರೆ ಸ್ಥಳೀಯರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com