ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ತಿರಸ್ಕರಿಸಿ: ಮತದಾರರಿಗೆ ಅಮಿತ್ ಶಾ ಕರೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ  ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೇ,  ಜಿಲ್ಲೆಯಲ್ಲಿ ಕನಿಷ್ಠ ನಾಲ್ವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.
ಅಮಿತ್ ಶಾ ರೋಡ್ ಶೋ
ಅಮಿತ್ ಶಾ ರೋಡ್ ಶೋ

ಸಕಲೇಶಪುರ: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ  ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೇ,  ಜಿಲ್ಲೆಯಲ್ಲಿ ಕನಿಷ್ಠ ನಾಲ್ವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಸಕಲೇಶಪುರದ ಆಲೂರಿನ ರೋಡ್ ಶೋ ವೇಳೆಯಲ್ಲಿ ಮಾತನಾಡಿದ ಅಮಿತ್ ಶಾ, ಭಾರೀ ಅಂತರದಿಂದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ಡಬಲ್ ಎಂಜಿನ್ ಸರ್ಕಾರದ ಮುಖ್ಯಸ್ಥರಾಗಿರುವ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಹೇಳಿದರು. ಪರೋಕ್ಷವಾಗಿ ಜೆಡಿಎಸ್ ಕಾಂಗ್ರೆಸ್ ನ ಬಿ ಟೀಂ ಎಂದು ಕರೆದ ಶಾ, ಒಂದು ವೇಳೆ ಜೆಡಿಎಸ್ ಗೆ ಮತ ನೀಡಿದರೆ ಅದು ಕಾಂಗ್ರೆಸ್ ಗೆ ಪ್ರಯೋಜನವಾಗಲಿದೆ ಎಂದರು. 

ವೀರಶೈವ ಲಿಂಗಾಯತ, ಒಕ್ಕಲಿಗ, ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳದ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಅಮಿತ್ ಶಾ, ಜನರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ, ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಅವರನ್ನು ಗೆಲ್ಲಿಸಿದ್ದರೆ ಸಕಲೇಶಪುರದ ಎಲ್ಲಾ ವಲಯದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ಜೆಡಿಎಸ್ ಪ್ರಾಬಲ್ಯದ ಕ್ಷೇತ್ರದಲ್ಲಿ ಅಮಿತ್ ಶಾ ರೋಡ್ ಶೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಆಲೂರಿನ ಬಿಜೆಪಿ ಕಾರ್ಯಕರ್ತರಿಂದ ಅಮಿತ್ ಶಾ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಮೂರು ಕಿ.ಮೀ ದೂರ ನಡೆದ ರೋಡ್ ಶೋ ವೇಳೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳಿಂದ ಸಹಸ್ರಾರು ಜನರು ಆಗಮಿಸಿದ್ದರು. ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ,  ಬೇಲೂರು ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್ ಮತ್ತು ಸಕಲೇಶಪುರದ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಸೇರಿದಂತೆ ಪಕ್ಷದ  ಸಹಸ್ರಾರು ಕಾರ್ಯಕರ್ತರು ರೋಡ್ ಶೋ ನಲ್ಲಿ ಪಾಲ್ಗೊಂಡರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com