ಪ್ರಬಲ ನಾಯಕರ ಸೇರ್ಪಡೆ: ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಸೀಟು ಗೆದ್ದು ನೆಲೆ ಭದ್ರಪಡಿಸಿಕೊಳ್ಳುವ ಹುಮ್ಮಸ್ಸಿನಲ್ಲಿ ಜೆಡಿಎಸ್

ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌ ಹಾಗೂ ಬಿಜೆಪಿಯ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್‌ ಅವರು ಜೆಡಿಎಸ್ ಸೇರ್ಪಡೆಯಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಇಷ್ಟು ವರ್ಷ ನೆಲೆ ಕಂಡುಕೊಳ್ಳಲು ಹರಸಾಹಸ ಪಡುತ್ತಿದ್ದ ಪ್ರಾದೇಶಿಕ ಪಕ್ಷಕ್ಕೆ ಈ ಬಾರಿ ಚುನಾವಣೆಯಲ್ಲಿ ಅವಕಾಶ ಸಿಕ್ಕಂತಾಗಿದೆ.
ಶಿವಮೊಗ್ಗದ ಪಕ್ಷದ ಮುಖಂಡರಾದ ಕೆ.ಬಿ.ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಂ.ಶ್ರೀಕಾಂತ್ ಅವರೊಂದಿಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ
ಶಿವಮೊಗ್ಗದ ಪಕ್ಷದ ಮುಖಂಡರಾದ ಕೆ.ಬಿ.ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಂ.ಶ್ರೀಕಾಂತ್ ಅವರೊಂದಿಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ

ಶಿವಮೊಗ್ಗ: ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌ ಹಾಗೂ ಬಿಜೆಪಿಯ ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್‌ ಅವರು ಜೆಡಿಎಸ್ ಸೇರ್ಪಡೆಯಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಇಷ್ಟು ವರ್ಷ ನೆಲೆ ಕಂಡುಕೊಳ್ಳಲು ಹರಸಾಹಸ ಪಡುತ್ತಿದ್ದ ಪ್ರಾದೇಶಿಕ ಪಕ್ಷಕ್ಕೆ ಈ ಬಾರಿ ಚುನಾವಣೆಯಲ್ಲಿ ಅವಕಾಶ ಸಿಕ್ಕಂತಾಗಿದೆ. ಈ ಬಾರಿ ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸದಲ್ಲಿದೆ.

1999 ರಲ್ಲಿ ಜನತಾ ದಳ ವಿಭಜನೆಯಾದ ನಂತರ ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ನೇತೃತ್ವದ ಬಣವು ಬಿಜೆಪಿ ನೇತೃತ್ವದ ಎನ್‌ಡಿಎಗೆ ತನ್ನ ಬೆಂಬಲವನ್ನು ನೀಡಿದಾಗ ಎಚ್.ಡಿ.ದೇವೇಗೌಡ ಮತ್ತು ಸಿದ್ದರಾಮಯ್ಯ ಅವರ ಸಾಮೂಹಿಕ ನಾಯಕತ್ವದಲ್ಲಿ ಜೆಡಿಎಸ್ ರಚನೆಗೆ ಕಾರಣವಾಯಿತು.

1999ರವರೆಗೆ ಶಿವಮೊಗ್ಗದಲ್ಲಿ ಜನತಾ ದಳ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುತ್ತಿತ್ತು. 1999 ಮತ್ತು 2004ರ ಚುನಾವಣೆಯಲ್ಲಿ ಜೆಡಿಎಸ್ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. 2008ರ ವಿಧಾನಸಭೆ ಚುನಾವಣೆಯಲ್ಲಿ ಭದ್ರಾವತಿಯಲ್ಲಿ ಕಾಂಗ್ರೆಸ್‌ ಗೆ ಪ್ರಬಲ ಪೈಪೋಟಿ ನೀಡಿದ್ದ ಅಪ್ಪಾಜಿಗೌಡ ಬಿ.ಕೆ.ಸಂಗಮೇಶ್ವರ ಅವರ ಎದುರು ಕೇವಲ 487 ಮತಗಳಿಂದ ಸೋಲು ಕಂಡಿದ್ದರು. ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್ ಮೂರನೇ ಸ್ಥಾನ ಹಾಗೂ ಶಿವಮೊಗ್ಗದಲ್ಲಿ ಪಕ್ಷದ ಅಭ್ಯರ್ಥಿ ಎಂ.ಶ್ರೀಕಾಂತ್ ಕೂಡ ಮೂರನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇತರೆ ಕ್ಷೇತ್ರಗಳಲ್ಲಿ ಪಕ್ಷಕ್ಕೆ ನೆಲೆ ಕಂಡುಕೊಳ್ಳಲು ಕಷ್ಟವಾಗಿತ್ತು.

2013ರ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿ ವಿಭಜನೆಯ ಲಾಭ ಪಡೆದು ಶಿವಮೊಗ್ಗ ಗ್ರಾಮಾಂತರದಿಂದ ಪೂರಿನಾಯ್ಕ್ ಗೆದ್ದಿದ್ದರು. ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರು ಕಾಂಗ್ರೆಸ್‌ನ ಸಿಎಂ ಇಬ್ರಾಹಿಂ ಅವರನ್ನು 56,041 ಮತಗಳ ಅಂತರದಿಂದ ಸೋಲಿಸಿದ್ದರು. ಮಧು ಬಂಗಾರಪ್ಪ ಸೊರಬದಿಂದ ಗೆದ್ದರು. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಶ್ರೀಕಾಂತ್ ಮೂರನೇ ಸ್ಥಾನ ಗಳಿಸಿದ್ದರು. 

2018ರ ಚುನಾವಣೆಯಲ್ಲಿ ಪೂರಿನಾಯ್ಕ್, ಅಪ್ಪಾಜಿಗೌಡ ಮತ್ತು ಮಧು ಬಂಗಾರಪ್ಪ ತೀವ್ರ ಪೈಪೋಟಿ ನೀಡಿದರೂ ಸೋಲು ಕಂಡಿದ್ದರು.

ಈ ಬಾರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಡುವೆ ತ್ರಿಕೋನ ಹಣಾಹಣಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಣುತ್ತಿದ್ದು, ಸೋತ ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಜೆಡಿಎಸ್ ಇದೆ. ಬಿಜೆಪಿ ಎಂಎಲ್ಸಿ ಆಯನೂರು ಮಂಜುನಾಥ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಮತ್ತು ಅವರ ಉಮೇದುವಾರಿಕೆ ಕ್ಷೇತ್ರವನ್ನು ಹೆಚ್ಚು ಜಿದ್ದಾಜಿದ್ದಿಯ ಕಣವನ್ನಾಗಿ ಮಾಡಿದೆ.

ಪ್ರಸನ್ನಕುಮಾರ್ ಮತ್ತು ಮಂಜುನಾಥ್ ಅವರ ಸೇರ್ಪಡೆ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಶ್ರೀಕಾಂತ್ ಹೇಳುತ್ತಾರೆ. ಶಿವಮೊಗ್ಗ ಗ್ರಾಮಾಂತರವನ್ನು ಸುಲಭವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿವಮೊಗ್ಗ ಹೊರತುಪಡಿಸಿ ಸೊರಬದಲ್ಲೂ ಗೆಲ್ಲುತ್ತೇವೆ. ಬೂತ್ ಮಟ್ಟದಲ್ಲಿ ನಮ್ಮ ನೆಲೆಯನ್ನು ಬಲಪಡಿಸಿದ್ದೇವೆ. ಸಮ್ಮಿಶ್ರ ಸರ್ಕಾರದಲ್ಲಿ ಉತ್ತಮ ಆಡಳಿತ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಪಕ್ಷದ ಪಂಚರತ್ನ ಯಾತ್ರೆ ಕೂಡ ಮಹತ್ವದ ಪ್ರಭಾವ ಬೀರಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com