ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸುಮಾ ವಿಜಯ್ ಬಿಜೆಪಿ ಸೇರಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಸೇರ್ಪಡೆಯಾದ ಎಂ.ಪಿ. ಪ್ರಕಾಶ್ ಪುತ್ರಿ ಎಂ.ಪಿ. ಸುಮಾ ವಿಜಯ, ಮೊಮ್ಮಗ ಸಾತ್ವಿಕ್ ವಿಜಯಕುಮಾರ್ ಹಿರೇಮಠ, ಅಳಿಯ ವಿಜಯಕುಮಾರ್ ಬಸವಣ್ಣಯ್ಯ ಹಿರೇಮಠರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.
ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ ಎಂ.ಪಿ.ಸುಮಾ ವಿಜಯ, ಅಳಿಯ ವಿಜಯ ಕುಮಾರ್ ಹಿರೇಮಠ, ಮೊಮ್ಮಗ ಸಾತ್ವಿಕ್ ಹಿರೇಮಠ, ಹೂವಿನಹಡಗಲಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಹಣ್ಣಿ ವೀರಮ್ಮ, ಪವಿತ್ರಾ ರಾಮಸ್ವಾಮಿ, ಕೊಡಿಹಳ್ಳಿ ಕೊಟ್ರೇಶ್, ರಾಮಸ್ವಾಮಿ ಚೈತನ್ಯ ಮತ್ತಿರ ಮುಖಂಡರು ಬಿಜೆಪಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಪಕ್ಷದ ರಾಜ್ಯಾಧ್ಯಕ್ಷ ಸ್ವಾಗತಿಸಿದರು.
Advertisement