ಕರ್ನಾಟಕದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ: ರಮೇಶ್ ಚೆನ್ನಿತಾಲ

ಜನರ ಮನಸ್ಥಿತಿಯನ್ನು ಅರಿಯಬಲ್ಲೆ, ಕರ್ನಾಟಕದಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತಾಲ ಅವರು ಹೇಳಿದ್ದಾರೆ.
ರಮೇಶ್ ಚೆನ್ನಿತಾಲ
ರಮೇಶ್ ಚೆನ್ನಿತಾಲ
Updated on

ಬೆಂಗಳೂರು: ಜನರ ಮನಸ್ಥಿತಿಯನ್ನು ಅರಿಯಬಲ್ಲೆ, ಕರ್ನಾಟಕದಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತಾಲ ಅವರು ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಐಟಿ ದಾಳಿಗಳು ಕೇವಲ ಭಯ ಹುಟ್ಟಿಸುವ ಸಲುವಾಗಿ ಆಗಿದೆ ಎಂದು ಹೇಳಿದ್ದಾರೆ.

ಕೇರಳದಲ್ಲಿ ಕಾಂಗ್ರೆಸ್ ಬೆಳವಣಿಗೆ ಕುರಿತು ಮಾತನಾಡಿ, ಸಂಸತ್ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ 19 ಸ್ಥಾನಗಳನ್ನು ಗೆದ್ದಿದ್ದೆವು. ಕೇರಳ ಕರಾವಳಿ ಪ್ರದೇಶಕ್ಕೆ ಹೋಲಿಕೆ ಮಾಡಿದರೆ, ಕರ್ನಾಟಕದ ಕರಾವಿ ಪ್ರದೇಶದಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.

ಆಂತರಿಕ ಕಲಹದ ಕುರಿತು ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರು ಪ್ರಬಲ ನಾಯಕರಾಗಿದ್ದು, ಪಕ್ಷದ ನಾಯಕನ ಸ್ಥಾನ ಕುರಿತು ಸಿಎಲ್‌ಪಿ ಮತ್ತು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಕೇರಳದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ನರಿಗೆ ಬಿಜೆಪಿ ಮೃಧುಧೋರಣೆ ತೋರುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯಿಂಗಾಹಿ ಇಂದು ಕ್ರಿಶ್ಚಿಯನ್ ಸಮುದಾಯವು ಸಂಕಷ್ಟಕ್ಕೆ ಸಿಲುಕಿದೆ. ದೆಹಲಿ, ಮುಂಬೈ ಮತ್ತು ಇತರ ಸ್ಥಳಗಳಲ್ಲಿ  ಕ್ರಿಶ್ಚಿಯನ್ ಸಮುದಾಯವು ಸಮುದಾಯಕ್ಕೆ ಸಂಕಷ್ಟವನ್ನು ಎದುರು ಮಾಡಿದೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳಿಂದ ಕ್ರಿಶ್ಚಿಯನ್ ಸಮುದಾಯಕ್ಕೆ ನೋವುಂಟಾಗಿದೆ ಎಂದು ಹೇಳಿದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಕೇವಲ ಜನರನ್ನು ಮೂರ್ಖರನ್ನಾಗಿಸಿದ್ದು, ಇದೀಗ ಚುನಾವಣೆ ಗೆಲ್ಲಲು ಹಣ ನೀಡುವುದರಲ್ಲಿ ನಿರತವಾಗಿದೆ. ಕಾಂಗ್ರೆಸ್ ಪಕ್ಷದ ಭರವಸೆಗಳಾಗಿರುವ 10 ಕೆಜಿ ಆಹಾರಧಾನ್ಯ, 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಮಹಿಳೆಯರಿಗೆ 2000 ರೂ. ಮತ್ತು ಪದವೀಧರರಿಗೆ ರೂ 3,000ಗಳು ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲು ಸಹಾಯ ಮಾಡುತ್ತದೆ. ಬಹುಮತದಿಂದ ಬಿಜೆಪಿ ಸರ್ಕಾರ ರಚನೆ ಮಾಡಿಲ್ಲ. ಆಪರೇಷನ್ ಕಮಲದಿಂದಾಗಿ ಸರ್ಕಾರ ರಚಿಸಿದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com