ರಾಹುಲ್ ಗಾಂಧಿ ಭರವಸೆಗಳ ಬಗ್ಗೆ ಎಚ್ಚರದಿಂದಿರಿ: ಮತದಾರರಿಗೆ ಮಧ್ಯಪ್ರದೇಶ ಸಿಎಂ ಎಚ್ಚರಿಕೆ

ಕಾಂಗ್ರೆಸ್ ನೀಡುವ ಸುಳ್ಳು ಭರವಸೆಗಳಿಗೆ ಮರುಳಾಗದಂತೆ ಮತದಾರರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್
ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್

ಬೆಳಗಾವಿ: ಕಾಂಗ್ರೆಸ್ ನೀಡುವ ಸುಳ್ಳು ಭರವಸೆಗಳಿಗೆ ಮರುಳಾಗದಂತೆ ಮತದಾರರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದಿಂ ದರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆಯೇ ಹೊರತು ಲಿಂಗಾಯತ ವಿರೋಧಿ ಧೋರಣೆ, ಭ್ರಷ್ಟಾಚಾರ, ಅಪರಾಧ ಮತ್ತು ಕಮಿಷನ್ ನೀಡಿದ ಕಾಂಗ್ರೆಸ್ ನಿಂದ ಆಗಿಲ್ಲ. ವಿರೋಧ ಪಕ್ಷಗಳು ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಮತದಾರರು ಈ ಸುಳ್ಳು ಭರವಸಗಳಿಗೆ ಮರುಳಾಗಬಾರದು ಎಂದು ಹೇಳಿದರು.

"(ಕಾಂಗ್ರೆಸ್ ನಾಯಕ) ರಾಹುಲ್ ಗಾಂಧಿಯವರ ಭರವಸೆಗಳ ಬಗ್ಗೆ ಎಚ್ಚರದಿಂದಿರಿ. ಅವರು ಸಾಲ ಮನ್ನಾ ಮಾಡುವ ಭರವಸೆ ನೀಡಿ ಮಧ್ಯಪ್ರದೇಶಕ್ಕೆ ಬಂದಿದ್ದರು. ಆದರೆ, ಏನನ್ನೂ ಮಾಡಲಿಲ್ಲ. ಕಾಂಗ್ರೆಸ್ ಮತಕ್ಕಾಗಿ ಏನು ಬೇಕಾದರೂ ಮಾಡಬಹುದು, ಆಕಾಶದಿಂದ ನಕ್ಷತ್ರಗಳನ್ನು ತಂದುಕೊಡುವ ಭರವಸೆಗಳನ್ನೂ ನೀಡಬಹುದು. "ಹಣ ಗಳಿಸಲು" ಚುನಾವಣೆಗಳ ಗೆಲ್ಲಲು ಕಾಂಗ್ರೆಸ್ ಬಯಸುತ್ತಿದೆ ಎಂದು ಆರೋಪಿಸಿದರು.

ರಾಜವಂಶದ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು, ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ ಬಲವರ್ಧನೆಯಾಗಲಿದೆ ಎಂದು ತಿಳಿಸಿದರು.

ಬಳಿಕ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದರೆ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

"ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಏಕೈಕ ಪಕ್ಷ ಬಿಜೆಪಿ, ಕರ್ನಾಟಕವನ್ನು ಇನ್ನಷ್ಟು ಬಲಪಡಿಸುವ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಆಡಳಿತದಿಂದ ರಾಜ್ಯವನ್ನು ಉಳಿಸಿದ್ದಕ್ಕಾಗಿ ರಮೇಶ್ ಜಾರಕಿಹೊಳಿಯವರಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಧನ್ಯವಾದಗಳನ್ನು ಹೇಳಿದರು.

ಗೋಕಾಕ್ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ ಒಂದಾಗಿದೆ, ಇದು ಬೆಂಗಳೂರು ನಗರ ನಂತರ ಎರಡನೇ ಅತಿ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ ಈ ಕ್ಷೇತ್ರದಿಂದ ಮಹಾಂತೇಶ ಕಡಾಡಿ ಅವರನ್ನು ಕಣಕ್ಕಿಳಿಸಿದೆ.

ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ 2,38,221 ಮತದಾರರಿದ್ದು, ಈ ಪೈಕಿ 1,16,816 ಪುರುಷ, 1,20,085 ಮಹಿಳಾ ಮತದಾರರಿದ್ದಾರೆ.

ಲಿಂಗಾಯತರು 75,000, ಎಸ್'ಸಿ-ಎಸ್'ಟಿ 45,000, ಮುಸ್ಲಿಂ 35000, ಕುರುಬ 25000 ಮತ್ತು 14,000 ಉಪ್ಪಾರ ಸಮಾಜದವರು ಕ್ಷೇತ್ರದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com