ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಮೋದಿ ಮಾತನಾಡುತ್ತಿದ್ದಾರೆ: ಡಿಕೆ.ಶಿವಕುಮಾರ್

ಸೋಲಿನ ಹತಾಶೆಗೊಳಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಸೋಲಿನ ಹತಾಶೆಗೊಳಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್ ಎಂದರೆ ಸುಳ್ಳು ಭರವಸೆ ಎಂಬ ಮೋದಿಯವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ಪ್ರಧಾನಿಗೆ ಬಿಜೆಪಿ ಭರವಸೆಗಳ ಬಗ್ಗೆ ಗೊತ್ತಿಲ್ಲವೇ. ನಾವು ಬಿಜೆಪಿಯವರಂತೆ ಎಲ್ಲರ ಖಾತೆಗೆ ರೂ.15 ಲಕ್ಷ ಹಾಕುತ್ತೇವೆ ಎಂದು ಹೇಳಿಲ್ಲ. ಬಿಜೆಪಿ ಪ್ರಣಾಳಿಕೆ ತೆಗೆದು ನೋಡಿ. ಅವರು ರೂ.1 ಲಕ್ಷದವರೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರ ಪಂಪ್ ಸೆಟ್ ಗೆ ನೀಡುವ ವಿದ್ಯುತ್ ಅನ್ನು 7 ತಾಸಿನಿಂದ 10 ತಾಸಿಗೆ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಜನವರಿ 16ರಂದು ಬೊಮ್ಮಾಯಿ ಅವರ ಸರ್ಕಾರ ಪತ್ರಿಕೆಗಳಿಗೆ ಕೊಟ್ಟಿರುವ ಜಾಹೀರಾತು ನೋಡಿ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವ ಭರವಸೆ ನೀಡಿದ್ದಾರೆ' ಎಂದು ಹೇಳಿದರು.

'ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮೋದಿ ಅವರು ತಮ್ಮ ಸರ್ಕಾರ ಜನರ ವಿಶ್ವಾಸ ಗಳಿಸಲು ವಿಫಲವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ. ಅವರು 2014ರ ಚುನಾವಣೆ ಸಮಯದಲ್ಲಿ ದೇಶದ ಮತದಾರರಿಗೆ ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದಿದ್ದರು. ಈಗ ಅದನ್ನೇ ಮಾಡಬೇಕು ಎಂದು ರಾಜ್ಯದ ಜನರಿಗೆ ನಾವು ಹೇಳುತ್ತಿದ್ದೇವೆ.

ಕಾಂಗ್ರೆಸ್ ಪಕ್ಷದ ನಾಲ್ಕು ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷಿ, ಅನ್ನ ಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡುವುದು ನಿಶ್ಚಿತ. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಈ ಯೋಜನೆ ಜಾರಿ ಮಾಡುತ್ತೇವೆ. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಈ ಯೋಜನೆ ಜಾರಿ ಮಾಡದಿದ್ದರೆ ನಾವು ಮತ್ತೆ ಜನರ ಮುಂದೆ ಮತ ಯಾಚಿಸುವುದಿಲ್ಲ’ ಎಂದು ತಿಳಿಸಿದರು.

ಪಕ್ಷದ ಬಂಡಾಯ ಅಭ್ಯರ್ಥಿಗಳಿಗೆ ಬರೆದಿರುವ ಪತ್ರದ ಬಗ್ಗೆ ಮಾತನಾಡಿ, ‘ನಾನು ಈಗಲೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಗಳಿಗೆ ಮುಂದಿನ 2-3 ದಿನಗಳಲ್ಲಿ ಚುನಾವಣೆ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. ಅವರು ಮಾಡದಿದ್ದರೆ, ಪಕ್ಷದ ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೇವೆ’ ಎಂದರು.

Related Stories

No stories found.

Advertisement

X
Kannada Prabha
www.kannadaprabha.com