'ಕೈ' ಹಿಡಿದ ನಾರಾಯಣ ಗೌಡ, ಪ್ರಭಾಕರ ರೆಡ್ಡಿ: ತಮ್ಮ ವಿರುದ್ಧ ಸೆಣೆಸಾಡಿದ್ದ ನಾಯಕರನ್ನೇ ಸೆಳೆದು ಹೆಚ್'ಡಿಕೆಗೆ ಟಕ್ಕರ್ ಕೊಟ್ಟ ಡಿಕೆ ಬ್ರದರ್ಸ್!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಅಖಾಡ ದಿನದಿಂದ ದಿನಕ್ಕೆ ರಂಗೇರ ತೊಡಗಿದೆ. ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಪಕ್ಷಾಂತರ ಪರ್ವ ಮಾತ್ರ ಮುಂದುವರೆದಿದೆ. ಹೊಸ ಬೆಳವಣಿಗೆಯೊಂದರಲ್ಲಿ ಡಿಕೆ ಬ್ರದರ್ಸ್ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರಿಗೆ ಟಕ್ಕರ್ ನೀಡಿದ್ದಾರೆ.
ಜೆಡಿಎಸ್ ಮುಖಂಡರಾದ ನಾರಾಯಣ ಗೌಡ ಮತ್ತು ಪ್ರಭಾಕರ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೇ ಸೇರ್ಪಡಗೊಂಡರು.
ಜೆಡಿಎಸ್ ಮುಖಂಡರಾದ ನಾರಾಯಣ ಗೌಡ ಮತ್ತು ಪ್ರಭಾಕರ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೇ ಸೇರ್ಪಡಗೊಂಡರು.
Updated on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಅಖಾಡ ದಿನದಿಂದ ದಿನಕ್ಕೆ ರಂಗೇರ ತೊಡಗಿದೆ. ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಪಕ್ಷಾಂತರ ಪರ್ವ ಮಾತ್ರ ಮುಂದುವರೆದಿದೆ. ಹೊಸ ಬೆಳವಣಿಗೆಯೊಂದರಲ್ಲಿ ಡಿಕೆ ಬ್ರದರ್ಸ್ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರಿಗೆ ಟಕ್ಕರ್ ನೀಡಿದ್ದಾರೆ.

2018ರ ಚುನಾವಣೆಗೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ನಾರಾಯಣಗೌಡ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಭಾಕರ ರೆಡ್ಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ನಾರಾಯಣಗೌಡ ಅವರು ಕಳೆದ ಬಾರಿ ಅಂದರೆ 2018ರಲ್ಲಿ ಕನಕಪುರ ಜೆಡಿಎಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್​ ವಿರುದ್ಧ ಸ್ಪರ್ಧಿಸಿದ್ದರು. ಇದೀಗ ಅವರನ್ನು ಡಿಕೆ ಶಿವಕುಮಾರ್​ ಕಾಂಗ್ರೆಸ್​ಗೆ​ ಸೇರಿಕೊಂಡಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಇಂದು ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

ಈ ಬಾರಿ ಡಿಕೆ ಶಿವಕುಮಾರ್​ ಅವರಿಗೆ ಪ್ರಬಲ ಪೈಪೋಟಿ ಕೊಡಲೇಬೇಕೆಂದು ಸಚಿವ ಆರ್ ಅಶೋಕ್​ ಅವರನ್ನು ಕನಕಪುರದಲ್ಲಿ ಕಣಕ್ಕಿಳಿಸಿದೆ. ಇದರ ಮಧ್ಯೆ ಈ ಹಿಂದೆ ತಮ್ಮ ವಿರುದ್ಧ ಸ್ಪರ್ಧಿಸಿ 47,643 ಮತಗಳನ್ನು ಪಡೆದುಕೊಂಡಿದ್ದ ನಾರಾಯಣಗೌಡ ಅವರು ಕಾಂಗ್ರೆಸ್​ ಸೇರಿದ್ದರಿಂದ ಡಿಕೆ ಶಿವಕುಮಾರ್ ಅವರಿಗೆ ಆನೆ ಬಲಬಂದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com