ವರುಣಾ: ಮೊಟ್ಟ ಮೊದಲ ಬಾರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಪ್ರಚಾರ

ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸೋಮಣ್ಣನ ಪರ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಮಾವನ ಪರ ಪ್ರಚಾರ ಕೈಗೊಂಡಿದ್ದು, ವರುಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸುತ್ತಿದ್ದಾರೆ.
ಸ್ಮಿತಾ ರಾಕೇಶ್ ಪ್ರಚಾರ
ಸ್ಮಿತಾ ರಾಕೇಶ್ ಪ್ರಚಾರ
Updated on: 

ಮೈಸೂರು: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸೋಮಣ್ಣನ ಪರ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಮಾವನ ಪರ ಪ್ರಚಾರ ಕೈಗೊಂಡಿದ್ದು, ವರುಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸುತ್ತಿದ್ದಾರೆ.

ಈ ವರೆಗೆ ಸಿದ್ದರಾಮಯ್ಯ ಕುಟುಂಬದಲ್ಲಿ ಗಂಡು ಮಕ್ಕಳನ್ನು ಬಿಟ್ಟರೆ ಅವರ ಪತ್ನಿ ಹಾಗೂ ಸೊಸೆ ಎಂದೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರಲಿಲ್ಲ. ಇದೇ  ಮೊದಲ ಬಾರಿಗೆ ಮಾವನ ಪರವಾಗಿ ರಾಕೇಶ್ ಸಿದ್ದರಾಮಯ್ಯ ಪತ್ನಿ ಸ್ಮಿತಾ ರಾಕೇಶ್ ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಮನೆ ಮನೆಗೆ ಹೋಗಿ, ಕಾಂಗ್ರೆಸ್​ಗೆ ಮತ ಹಾಕುವಂತೆ ಮನವಿ ಮಾಡುತ್ತಿದ್ದಾರೆ.​

ಇತ್ತೀಚೆಗೆ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮೊದಲ ಬಾರಿಗೆ ರಾಕೇಶ್ ಸಿದ್ದರಾಮಯ್ಯ ಮಗ 17 ವರ್ಷದ ಧವನ್ ರಾಕೇಶ್ ನನ್ನು ಮಾಜಿ ಸಿಎಂ ಸಿದ್ದರಾಮಯ್ಯನವರೇ ಸ್ವತಃ ಸಾರ್ವಜನಿಕ ಸಭೆಯಲ್ಲಿ ಮುಂದೆ ಈತ ರಾಜಕೀಯಕ್ಕೆ ಬರುತ್ತಾನೆ ಎಂದು ಪರಿಚಯ ಮಾಡಿಕೊಟ್ಟಿದ್ದರು.

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಕಳೆದ 15 ವರ್ಷಗಳಿಂದ ಶಾಸಕರಾಗಿ ಆಯ್ಕೆ ಆಗುತ್ತಿದ್ದಾರೆ. ವರುಣಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕರಾಗಿ ಹಾಗೂ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ಅವರು ತಂದೆಗೆ ಮತ್ತೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು, ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com