ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು, ಆಯೋಗವೋ? ಬಿಜೆಪಿಯೇ?: ಶೋಭ ಕರಂದ್ಲಾಜೆ ಪತ್ರಕ್ಕೆ ಸಿದ್ದರಾಮಯ್ಯ ಕಿಡಿ

ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ, ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶೋಭಾ ಕರಂದ್ಲಾಜೆ ಪತ್ರ
ಶೋಭಾ ಕರಂದ್ಲಾಜೆ ಪತ್ರ
Updated on

ಬೆಂಗಳೂರು: ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ, ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣೆ ಏಜಂಟರಿಗೆ ಬರೆದ ಪತ್ರದ ಕುರಿತು ಪ್ರಸ್ತಾಪಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ. ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಕೇಳಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗಿರುವುದು ಸ್ಪಷ್ಟವಾಗಿದೆ. ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com