ಕಾಂಗ್ರೆಸ್ ಭರವಸೆಗಳು ಕೇವಲ ಘೋಷಣೆಗೆ ಸೀಮಿತ, ಅನುಷ್ಠಾನ ಅಸಾಧ್ಯ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ ನೀಡಿದ ಭರವಸೆಗಳನ್ನು ಲೇವಡಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚುನಾವಣೆಗೆ ಮುನ್ನ ಜನರನ್ನು ವಂಚಿಸುವುದು ಗ್ರ್ಯಾಂಡ್ ಓಲ್ಡ್ ಪಕ್ಷದ ಏಕೈಕ ಗ್ಯಾರಂಟಿ ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ರಾಜ್ಯದ ಜನತೆ ಕಾಂಗ್ರೆಸ್ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ನೀಡಿದ ಚುನಾವಣೆ ಭರವಸೆಗಳು ಕೇವಲ ಘೋಷಣೆಗಳಾಗಿದ್ದು, ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ ಎಂದರು.
"ಇತರ ರಾಜ್ಯಗಳಲ್ಲಿ, ಅವರು ತಮ್ಮ ಚುನಾವಣಾ ಆಶ್ವಾಸನೆಗಳನ್ನು ಕಾರ್ಯಗತಗೊಳಿಸಲು ವಿಫಲರಾಗಿದ್ದಾರೆ. ಕೆಲವು ರಾಜ್ಯಗಳಲ್ಲಿ, ಅವರ ಅಧಿಕಾರಾವಧಿಯು ಕೊನೆಗೊಳ್ಳುತ್ತಿದೆ ಮತ್ತು ಜನರು ಇನ್ನೂ ಯೋಜನೆಗಳಿಗಾಗಿ ಕಾಯುತ್ತಿದ್ದಾರೆ ” ಎಂದು ಸಿಎಂ ಬೊಮ್ಮಾಯಿ ಆರೋಪಿಸಿದರು.
ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಾರಿಗೆ ಬಹುಮತ ಕೊಡಬೇಕು ಎಂಬುದನ್ನು ರಾಜ್ಯದ ಜನ ನಿರ್ಧರಿಸುತ್ತಾರೆ. ನಮ್ಮ ಮತದಾರರ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಎಂದರು.
ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಶ್ಲಾಘಿಸಿದ ಸಿಎಂ, ಚುನಾವಣೆಯಲ್ಲಿ ಗೆಲ್ಲಲು ಬೂತ್‌ಗಳನ್ನು ಗೆಲ್ಲಲು ಒತ್ತು ನೀಡಲಾಗಿದೆ ಮತ್ತು ಅದೇ ತಂತ್ರವನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ