'ನೀವು ಜೆಡಿಎಸ್ ಗೆ ಓಟು ಹಾಕಿದ್ರೂ ನನಗೆ ಓಟು ಹಾಕಿದಂತೆ, ದೇವೇಗೌಡ್ರು-ಮೋದಿ ಸಾಹೇಬ್ರು ಮಾತಾಡ್ಕೊಂಡವ್ರೆ'-ಪ್ರೀತಂ ಗೌಡ ಸಂಚಲನ ಹೇಳಿಕೆ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಹಾಸನ ಕ್ಷೇತ್ರವೂ ಒಂದು. ಇಲ್ಲಿ ಬಿಜೆಪಿಯ ಪ್ರೀತಂ ಗೌಡ ಮತ್ತು ಜೆಡಿಎಸ್ ನ ಸ್ವರೂಪ್ ಮಧ್ಯೆ ಪ್ರಬಲ ಪೈಪೋಟಿಯಿದೆ.
ಪ್ರೀತಂ ಗೌಡ
ಪ್ರೀತಂ ಗೌಡ

ಹಾಸನ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಹಾಸನ ಕ್ಷೇತ್ರವೂ ಒಂದು. ಇಲ್ಲಿ ಬಿಜೆಪಿಯ ಪ್ರೀತಂ ಗೌಡ ಮತ್ತು ಜೆಡಿಎಸ್ ನ ಸ್ವರೂಪ್ ಮಧ್ಯೆ ಪ್ರಬಲ ಪೈಪೋಟಿಯಿದೆ.

ಹೀಗಿರುವಾಗ ನಿನ್ನೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ವೇಳೆ ಪ್ರೀತಂ ಗೌಡ ಒಂದು ವಿವಾದದ, ಚರ್ಚಾಸ್ಪದ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಪಕ್ಷದ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದ್ದರೆ ಹಲವರಿಗೆ ಅಚ್ಚರಿ ಮೂಡಿಸಿದೆ. 

ಜೆಡಿಎಸ್‌ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಬಹುಮತ ಬರುವುದಿಲ್ಲ. ಈಗಾಗಲೇ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಹೇಬ್ರು ಹಾಗೂ ದೇವೇಗೌಡ್ರು ಇಬ್ಬರೂ ಒಪ್ಪಂದ ಮಾಡಿಕೊಂಡಿದ್ದಾರೆ. ಹಾಗಾಗಿ ನೀವು ಜೆಡಿಎಸ್‌ಗೆ ಮತ ಹಾಕಿದರೂ ಬಿಜೆಪಿಗೆ ಹಾಕಿದಂತೆ ಎಂದು ಜೆಡಿಎಸ್ ಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿದ್ದಾರೆ. 

ನೀವು ಹಾಸನದಿಂದ ಬೆಂಗಳೂರಿಗೆ ಹೋಗುವುದಾದರೆ ಬೆಳ್ಳೂರು ಕ್ರಾಸ್‌ ಮೇಲೆಯೇ ಹೋಗಬೇಕು. ಅದನ್ನು ಬಿಟ್ಟು ಮೈಸೂರು ಸುತ್ತಿಕೊಂಡು ಹೋಗುತ್ತೇನೆ ಎಂದರೆ ನಾನೇನು ಮಾಡಲು ಆಗಲ್ಲ. ಎಲ್ಲಾ ಹಳ್ಳದ ನೀರು ಹರಿದು ಸಮುದ್ರಕ್ಕೇ ಬರೋದು. ಹಾಗಾಗಿ ನೀವು ಸುತ್ತಾಡಿಕೊಂಡು ನನ್ನ ಬಳಿ ಬರುವುದಕ್ಕಿಂತ ನೇರವಾಗಿ ಬನ್ನಿ. ಜೆಡಿಎಸ್‌ ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ ಯಾಕೆಂದ್ರೆ ಈಗಾಗ್ಲೇ ದೇವೇಗೌಡ್ರು ಮತ್ತು ಮೋದಿ ಸಾಹೇಬ್ರು ಮಾತಾಡ್ಕೊಂಡಿದ್ದಾರೆ ಎಂದರು.

ಪ್ರೀತಂ ಗೌಡ ಹೇಳಿಕೆ ಚುನಾವಣೆಯಲ್ಲಿ ಯಾವ ರೀತಿ ಪ್ರಭಾವ ಬೀರಲಿದೆ, ಇದಕ್ಕೆ ಬಿಜೆಪಿ ನಾಯಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com