ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ: ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಸ್ಪಷ್ಟನೆ

ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ (ಸಂಗ್ರಹ ಚಿತ್ರ)
ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ (ಸಂಗ್ರಹ ಚಿತ್ರ)

ಬೆಳಗಾವಿ: ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಯಾವುದೇ ರೀತಿ ಯಾವುದೇ ಸಂದರ್ಭದಲ್ಲಿ ಅವರಿಬ್ಬರ ನಡುವೆ ಕೋಲ್ಡ್ ವಾರ್ ನಡೆದಿಲ್ಲ. ಸಮನ್ವಯದಲ್ಲಿ ಎಲ್ಲ ಕೆಲಸ, ಕಾರ್ಯಗಳು ನಡೆದಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರವರ ಜಿಲ್ಲೆಯ ಉಸ್ತುವಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು.

ಬೆಳಗಾವಿ ದೊಡ್ಡ ಜಿಲ್ಲೆ. ಸಚಿವ ಸತೀಶ ಜಾರಕಿಹೊಳಿ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವುದು ತೃಪ್ತಿ ಇದೆ ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಸ್ಪರ್ಧಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಎಲ್ಲರು ಕೆಲಸ ಮಾಡಬೇಕಿದೆ. ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುವುದು ಎಲ್ಲರ ಜವಾಬ್ದಾರಿ ಎಂದರು.

 ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದರು. ಆದ್ದರಿಂದ ಸರ್ಕಾರ ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಈಗ ಗೃಹ ಜ್ಯೋತಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ. ಗೃಹ ಲಕ್ಷ್ಮೀ ಯೋಜನೆಯನ್ನು ಬೆಳಗಾವಿಯಿಂದಲೇ ಚಾಲನೆ ನೀಡಲು ನಿರ್ಧರಿಸಲಾಗಿದೆ. ಸಿಪಿಎಡ್ ಆವರಣದಲ್ಲಿ ಸುಮಾರು 2 ಲಕ್ಷ ಮಹಿಳೆಯರು ಸೇರುವ ಸಂಭವ ಇದೆ. ಈ ಬಗ್ಗೆ ಸತೀಶ್ ಜಾರಕಿಹೊಳಿ ಅವರೊಂದಿಗೆ ಚರ್ಚಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com