ಆರೋಪ ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ: ಕಾಂಗ್ರೆಸ್'ಗೆ ಪ್ರಹ್ಲಾದ್ ಜೋಶಿ ಸವಾಲು

ಕೇಂದ್ರ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಡಿರುವ ಆರೋಪವನ್ನು ಸಾಬೀತುಪಡಿಸಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಧಾರವಾಡ: ಕೇಂದ್ರ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಡಿರುವ ಆರೋಪವನ್ನು ಸಾಬೀತುಪಡಿಸಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ.

ಜಿಲ್ಲೆಯ ಅಳ್ನಾವರದಲ್ಲಿ ಭಾನುವಾರ ನಡೆದ ಅಮೃತ್ ಭಾರತ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ಆರೋಪಗಳನ್ನು ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಇಲ್ಲದಿದ್ದಲ್ಲಿ ಅವರೇ ನಿವೃತ್ತಿಯಾಗಬೇಕು ಎಂದು ಸವಾಲು ಹಾಕಿದರು.

“ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ವಿರೋಧಿಸುವುದರಲ್ಲಿ ನಿರತರಾಗಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಬಹುಪಾಲು ಮುಖಂಡರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಅವರಿಗೆ ಇತರರ ಮೇಲೆ ಆರೋಪ ಮಾಡುವ ನೈತಿಕತೆ ಎಂದು ಕಿಡಿಕಾರಿದರು.

ಬಿಜೆಪಿ ಸರ್ಕಾರ ಸಂವಿಧಾನ ಮತ್ತು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತಿದೆ. 30 ರಿಂದ 40 ಸಾವಿರ ಕೋಟಿ ರೂ. ಸಾಲ ನಾವು ಈಗಾಗಲೇ ವಸೂಲಿ ಮಾಡಿದ್ದೇವೆ. ಓಡಿ ಹೋದವರನ್ನು ಕರೆದು ವಸೂಲಿ ಮಾಡುತ್ತೇವೆ. ಓಡಿ ಹೋದವರಿಗೆ ಸಾಲ ಕೊಟ್ಟವರೇ ಇವರು. ಓಡಿ ಹೋದವರು ಬಂದರೆ ಅದೆಲ್ಲ ಹೊರಗೆ ಬರುತ್ತದೆ. ಹೀಗಾಗಿ ಓಡಿ ಹೋದ ವಂಚಕರು ವಾಪಸ್ ಬರದಂತೆ ತಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com