ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ "ಬ್ರದರ್ರೋ"?

ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧ ಕೇಳಿಬಂದಿರುವ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧ ಕೇಳಿಬಂದಿರುವ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಆರೋಪ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಪ್ರತಿಪಕ್ಷ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. ಬಿಜೆಪಿ ಯ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ "ಬ್ರದರ್ರೋ"?'' ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ಅವರಿಗೂ ಟಾಂಗ್ ನೀಡಿದ್ದಾರೆ.

ಈ ನಡುವೆ ಬಿಜೆಪಿಯ ಟ್ವೀಟ್ ಪ್ರಹಾರಕ್ಕೆ ಕಾಂಗ್ರೆಸ್ ಟ್ವೀಟರ್ ಎಕೌಂಟ್ ನಿಂದಲೂ ಕೌಂಟರ್ ನೀಡಲಾಗಿದೆ. ``ನಕಲಿ ಪೆನ್ ಡ್ರೈವ್ ಆಯ್ತು, ಈಗ ನಕಲಿ ಪತ್ರದ ಮೊರೆ ಹೋಗಿದ್ದಾರೆ ವಿರೋಧ ಪಕ್ಷದ ಬೃಹಸ್ಪತಿಗಳು! ಫೇಕ್ ಫ್ಯಾಕ್ಟರಿಯ ಮಾಲೀಕರು ಮೊದಲು ಸಾಮಾಜಿಕ ಜಾಲತಾಣಗಳಿಗೆ ಮಾತ್ರ ಸೀಮಿತರಾಗಿದ್ದರು, ಈಗ ಸರ್ಕಾರಿ ವ್ಯವಸ್ಥೆ, ರಾಜ್ಯಪಾಲರ ಕಚೇರಿಗೂ ತಮ್ಮ ನಕಲಿ ಜಾಲ ವಿಸ್ತರಿಸಿದ್ದಾರೆಂದು ಹೇಳಿದೆ.

ಕೃಷಿ ಸಚಿವರ ವಿರುದ್ಧ ಅಧಿಕಾರಿಗಳು ಲಂಚದ ಆರೋಪ ಹೋರಿಸಿ ರಾಜ್ಯಪಾಲರಿಗೆ ಬರೆದಿರುವ ಪತ್ರವೇ ನಕಲಿ. ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳ ಸಹಿಯನ್ನು ನಕಲಿ ಮಾಡಲಾಗಿದೆ, ನಕಲಿ ವಿಳಾಸವನ್ನು ನೀಡಲಾಗಿದೆ, ಈ ವಿಚಾರವನ್ನು ಆ ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ನಕಲಿ ಜಾಲವು ರಾಜ್ಯಪಾಲರ ಕಚೇರಿಯನ್ನೇ ಯಾಮಾರಿಸುವಷ್ಟರ ಮಟ್ಟಿಗೆ ಬೆಳೆದಿದೆ, ನಮ್ಮ ಸರ್ಕಾರ ನಕಲಿ ಜಾಲವನ್ನು ಮಟ್ಟ ಹಾಕಲು ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ. ರಾಜ್ಯಪಾಲರಿಗೆ ಬರೆದ ಪತ್ರವು ಸಂಪೂರ್ಣ ನಕಲಿ ಎನ್ನುವುದು ತಿಳಿದುಬಂದಿದ್ದು ಇದರ ವಿರುದ್ಧ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ. ಇದರ ತನಿಖೆ ನಡೆಸಿ ಇದರಲ್ಲಿ ಅದೆಷ್ಟೇ ದೊಡ್ಡವರ ಕೈವಾಡವಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದು ನಿಶ್ಚಿತ.'' ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com