ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ: ಶಾಸಕ ರಂಗನಾಥ್

ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆಂದು ಕುಣಿಗಲ್‌ನ ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ.
ಮುಖ್ಯಮಂತ್ರಿಗಳು ಸಭೆ ನಡೆಸುತ್ತಿರುವುದು.
ಮುಖ್ಯಮಂತ್ರಿಗಳು ಸಭೆ ನಡೆಸುತ್ತಿರುವುದು.

ಬೆಂಗಳೂರು: ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆಂದು ಕುಣಿಗಲ್‌ನ ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ.

ಶಾಸಕರು ಹಾಗೂ ಸಚಿವರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದು, ಈ ಸಭೆಯಲ್ಲಿ ತುಮಕೂರಿನ ಏಳು ಶಾಸಕರು ಭಾಗವಹಿಸಿದ್ದರು. ಶಾಸಕರ ಜತೆ ನಿತ್ಯ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದರು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆಯೂ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆಂದು ತಿಳಿಸಿದರು.

ಪಕ್ಷಕ್ಕೆ ಹಾಗೂ ನಾಯಕತ್ವಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಿ. ಯಾವುದೇ ಪಕ್ಷ ಅಥವಾ ಸಂಘಟನೆಯಲ್ಲಿ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಆದರೆ, ಅದನ್ನು ದೊಡ್ಡದು ಮಾಡಬಾರದು ಎಂದು ಹೇಳಿದರು.

ಇದೇ ವೇಳೆ ಉಸ್ತುವಾರಿ ಸಚಿವರು ಸದಾಕಾಲ ಜಿಲ್ಲಾ ಪ್ರಧಾನ ಕಚೇರಿಗಳಲ್ಲಿಯೇ ಬೀಡು ಬಿಟ್ಟಿರುತ್ತಾರೆಯೇ ಹೊರತು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡುವುದಿಲ್ಲ ಎಂದು ಕೆಲ ಶಾಸಕರು ದೂರು ನೀಡಿದಾಗ, ಒಂದೇ ಕಡೆ ಕುಳಿತುಕೊಳ್ಳದಂತೆ ಸಚಿವರಿಗೆ ಸೂಚನೆ ನೀಡಿದರು ಎಂದು ತಿಳಿಸಿದರು.

ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಶಾಸಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com