'ತುಂಬಿ ತುಳುಕುತ್ತಿದೆ ಎಟಿಎಂ ಸರ್ಕಾರದ ಮಡಿಲು; ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಿದಾಗಿದೆ ಜಲಾಶಯಗಳ ಒಡಲು'

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ ಚಿಂತೆ ಇಲ್ಲ. ಬಿತ್ತನೆ ಬೀಜ ದರ ನಿಗ್ರಹಕ್ಕೂ ಸರ್ಕಾರ ಒಪ್ಪುತ್ತಿಲ್ಲ, ಕೃಷಿ ಇಲಾಖೆಯ ಕರ್ಮಕಾಂಡಕ್ಕೆ ಕೊನೆಯಿಲ್ಲ, ರೈತರು ಬಿತ್ತಿದ ಬೀಜ ಮೊಳಕೆ ಒಡೆಯುತ್ತಿಲ್ಲ, ಆದರೂ ಸರ್ಕಾರದ ಕಲೆಕ್ಷನ್ ನಿಲ್ಲುತ್ತಿಲ್ಲ’ ಎಂದು ಟೀಕಿಸಿದೆ.

ರಾಜ್ಯದಲ್ಲಿ ಬರದ ಬೇಗೆಗೆ ಐವತ್ತಕ್ಕೂ ಹೆಚ್ಚು ತಾಲ್ಲೂಕುಗಳು ತತ್ತರಿಸಿವೆ. ಆದರೆ, ಸಿದ್ದರಾಮಯ್ಯ ಆಡಳಿತ ಉತ್ತರ ಹುಡುಕುತ್ತಿಲ್ಲ. ಮಳೆ ಇಲ್ಲದೆ ಜಲಾಶಯಗಳ ತುಂಬುತ್ತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ಮಡಿಲು ಮಾತ್ರ ತುಂಬಿ ತುಳುಕುತ್ತಿದೆ. ಬರಗಾಲ ಬಂದರೂ ತಾನು ಮಾತ್ರ ಬೆಣ್ಣೆ ತಿನ್ನುತ್ತಿರುವ ಈ ಸರ್ಕಾರದ ಹಸಿವು ನೀಗುವವರೆಗೂ ರೈತನ ಉಸಿರಿಗಿಲ್ಲ ಗ್ಯಾರಂಟಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದೆಂದೂ ಕೇಳರಿಯದ ರೀತಿಯಲ್ಲಿ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪ್ರವೇಶಕ್ಕೇ ನಿರ್ಬಂಧ ಇರಬೇಕಾದ ಕಲೆಕ್ಷನ್ ಏಜೆಂಟರಿಗೆ ಕರ್ನಾಟಕ ಕಾಂಗ್ರೆಸ್ ಕಚೇರಿಯಲ್ಲೇ ಕುರ್ಚಿ ಮಾತ್ರವಲ್ಲ, ಕೊಠಡಿಯೂ ನೀಡಿ ಸಾಕುತ್ತಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನೂ ಮಾಡದೆ‌ ಎಟಿಎಂ ಸರ್ಕಾರ ಲಂಚವನ್ನೇ ಅಧಿಕೃತಗೊಳಿಸುತ್ತಿದೆ.

ಎತ್ತ ಸಾಗುತ್ತಿದೆ ಕರ್ನಾಟಕ..?? ಗೂಂಡಾ ರೌಡಿಯೊಬ್ಬ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಬೇಕೆ..? ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ತ್ರಿವರ್ಣ ಧ್ವಜ ರಾರಾಜಿಸುವ ಬದಲು ಕರ್ನಾಟಕ ಕಾಂಗ್ರೆಸ್ ನ  ಧ್ವಜ ಮತ್ತು ಚಿಹ್ನೆ ಮೇಳೈಸಬೇಕೆ..? ಸ್ವಾತಂತ್ರ್ಯ ದಿನದಂತಹ ಪವಿತ್ರ ದಿನದಂದು, ಮಕ್ಕಳು & ಸಾರ್ವಜನಿಕರು ಗೂಂಡಾಗಳ ಭಾಷಣ ಕೇಳುವಂತಾಗಿರುವುದು ದುರಂತ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com