ರಾಜಕೀಯ

ಎಚ್‌ಡಿ ಕುಮಾರಸ್ವಾಮಿ ಈ ನಾಡಿನ ಜನರ ಧ್ವನಿ, ಯಾವುದೇ ಪಕ್ಷಕ್ಕೆ ಸೇರಿದವರಲ್ಲ: ಸಿಎಂ ಸಿದ್ದರಾಮಯ್ಯಗೆ ತಿರುಗೇಟು

ಎಚ್‌ಡಿ ಕುಮಾರಸ್ವಾಮಿ ಈ ನಾಡಿನ ಜನರ ಧ್ವನಿ, ಯಾವುದೇ ಪಕ್ಷಕ್ಕೆ ಸೇರಿದವರಲ್ಲ: ಸಿಎಂ ಸಿದ್ದರಾಮಯ್ಯಗೆ ತಿರುಗೇಟು
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಬಿಜೆಪಿ ವಕ್ತಾರ ಎಂದು ಕರೆದಿದ್ದಕ್ಕೆ ತಿರುಗೇಟು ನೀಡಿದ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ತಾವು ಯಾವುದೇ ಪಕ್ಷದವರಲ್ಲ, ಕನ್ನಡಿಗರ ಧ್ವನಿ ಎಂದು ಹೇಳಿದರು. 

ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಅವರು, ಜನರು ತಮ್ಮನ್ನು ಪ್ರತಿಪಕ್ಷದಲ್ಲಿ ಇರಿಸಲು ನಿರ್ಧರಿಸಿದ್ದಾರೆ ಮತ್ತು ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮೂಲಕ ಅವರ ಧ್ವನಿಯಾಗಿ ಮುಂದುವರಿಯುತ್ತೇನೆ ಎಂದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕುಮಾರಸ್ವಾಮಿ, ಪಕ್ಷದ ‘ಗರೀಬಿ ಹಠಾವೋ’ ಘೋಷಣೆಯಾಗಿಯೇ ಉಳಿದಿದೆ ಮತ್ತು ಅಸಮಾನತೆ ಖಾತರಿಯಾಗಿದೆ. ಇದಲ್ಲದೆ, ಸ್ವಾತಂತ್ರ್ಯದ ಮೊದಲು ಒಂದೇ ಈಸ್ಟ್ ಇಂಡಿಯಾ ಕಂಪನಿ ಇತ್ತು. ಆದರೆ, ಇಂದು ರಾಷ್ಟ್ರೀಯ ಪಕ್ಷಗಳ ರೂಪದಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಲೇವಡಿ ಮಾಡಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳು ಸಿನಿಮಾ ಸೀಕ್ವೆಲ್‌ನಂತೆ ಪ್ರತಿದಿನ ಬಯಲಾಗುತ್ತಿವೆ. ಈ ಸರ್ಕಾರಕ್ಕೆ ತೆರೆ ಬೀಳುವ ದಿನ ಬಹಳ ದೂರವಿಲ್ಲ ಎಂದು ಅವರು ಹೇಳಿದರು.

ಹೆಚ್‌ಡಿ ಕುಮಾರಸ್ವಾಮಿ ಆರೋಪಗಳು 'ಹಿಟ್ ಅಂಡ್ ರನ್' ಕೇಸ್ ಇದ್ದಂತೆ, ಖಾಲಿ ಪೆನ್ ಡ್ರೈವ್ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಸಾಕ್ಷ್ಯಾಧಾರಗಳನ್ನು ತೋರಿಸಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯವಿದೆಯೇ ಎಂದು ಪ್ರಶ್ನಿಸಿದರು.

ತಮಿಳುನಾಡು ಸರ್ಕಾರ ನೀರು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕುರಿತು ಪ್ರತಿಕ್ರಿಯಿಸಿದ ಅವರು, 'ಅವರು (ಕಾಂಗ್ರೆಸ್) ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ಈ ವಿಚಾರದಲ್ಲಿ ಅವರು ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ' ಎಂದು ಹೇಳಿದರು. 

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಲ್ಲಾ ನಾಯಕರು ಮತ್ತು ಪಕ್ಷಗಳು ತಮ್ಮ ಬಳಿ ಇರುವ ಸಾಕ್ಷ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಲು ಸ್ವತಂತ್ರರು ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.