ರಾಜಕೀಯ ನಿವೃತ್ತಿ ಪಡೆಯುತ್ತೇನೆ ಹೊರತು, ಕಾಂಗ್ರೆಸ್‌ಗೆ ಹೋಗಲ್ಲ- ಮುನಿರತ್ನ: ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ- ಡಿಕೆ ಸುರೇಶ್

ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಆರ್.‌ಆರ್‌.ನಗರ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.
ಮುನಿರತ್ನ
ಮುನಿರತ್ನ

ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಆರ್.‌ಆರ್‌.ನಗರ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ನಗರದ ವೈಯಾಲಿಕಾವಲ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ''ನನಗೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಬಿಜೆಪಿಯಲ್ಲೇ ಇರುತ್ತೇನೆ ರಾಜಕೀಯ ಬೇಡ ಎನಿಸಿದರೇ ನಿವೃತ್ತಿಯಾಗುತ್ತೇನೆ. ನಾನು ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟಲ್ಲ'' ಎಂದು ಸ್ಪಷ್ಟನೆ ನೀಡಿದರು.

17 ಶಾಸಕರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೋ ಗೊತ್ತಿಲ್ಲ, ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ, ಡಿಕೆ ಶಿವಕುಮಾರ್ ಬೆಂಗಳೂರು ಸಚಿವರಾಗಿರುವ ಹಿನ್ನಲೆ ಭೇಟಿಯಾಗಿದ್ದೇನೆ. ರಾಜಕೀಯ ನಿವೃತ್ತಿ ಪಡೆದ್ರೂ ಪರ್ವಾಗಿಲ್ಲ, ಬಿಜೆಪಿ ಬಿಟ್ಟು ಹೋಗಲ್ಲ, ಡಿಕೆಶಿ ಜೊತೆ ರಾಜಕೀಯದ ಸಂಬಂಧ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

17 ಶಾಸಕರ ಘರ್ ವಾಪ್ಸಿ ಸಂಬಂಧ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ ಸುರೇಶ್, ಲೋಕಸಭಾ ಚುನಾವಣೆ ಬಗ್ಗೆ ಈಗಾಗಲೇ ವರಿಷ್ಠರ ಜೊತೆ ದೆಹಲಿಯಲ್ಲಿ ಸಭೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ, ತಯಾರಿ ಬಗ್ಗೆ ಮಾರ್ಗಸೂಚಿ ನೀಡಿದ್ದಾರೆ. ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತ, ಇದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು  ಹೇಳಿದ್ದಾರೆ.

ರಾಜ್ಯ ರಾಜಕೀಯಕ್ಕೆ ಮಹತ್ವದ ತಿರುವು ನೀಡಿದ ಮಿತ್ರ ಮಂಡಳಿ, ಮುಂದಿನ ದಾಳ ಉರುಳಿಸೋಕೆ ಸಜ್ಜಾಗುತ್ತಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಿಜೆಪಿಗೆ ಹಾರಿದ್ದ ಪಕ್ಷಾಂತರಿಗಳು, ದೋಸ್ತಿ ಸರ್ಕಾರವನ್ನ ಉರುಳಿಸಿದ್ದಷ್ಟೇ ಅಲ್ಲ, ಬಿಜೆಪಿ ಸರ್ಕಾರ ರಚನೆಗೂ ಕಾರಣವಾಗಿ ಮಂತ್ರಿಗಳಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇ ತಡ, ಇವರೆಲ್ಲರೂ ತಮ್ಮ ತವರು ಪಕ್ಷಕ್ಕೆ ವಾಪಸ್ ಆಗುವ ಸಿದ್ದತೆಯಲ್ಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com