ಸರ್ಕಾರದ ಭವಿಷ್ಯ ಆರೇ ತಿಂಗಳು: ಭವಿಷ್ಯ ನುಡಿಯಲು ಯತ್ನಾಳ್ ಜ್ಯೋತಿಷಿಯೇ?- ಸಚಿವ ರಾಜಣ್ಣ
ಹಾಸನ: ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಕೆ.ಎನ್.ರಾಜಣ್ಣ ಅವರು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರಿಗೆ ನಾಲಿಗೆಯ ಮೇಲೆ ಹಿಡಿತವಿಲ್ಲ. ಮೂರ್ಖ ಹೇಳಿಕೆಗಳನ್ನು ನೀಡಲು ಅವರು ಹೆಸರುವಾಸಿಯಾಗಿದ್ದಾರೆ. ಈ ರೀತಿ ಭವಿಷ್ಯ ನುಡಿಯಲು ಅವರೇನು ಜ್ಯೋತಿಷಿಯೇ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಗ್ಯಾರಂಟಿ ಯೋಜನೆಗಳ ಜಾರಿಗೊಳಿಸುವತ್ತ ಸರ್ಕಾರದ ಗಮನ ಹರಿಸಿದೆ. ರಾಷ್ಟ್ರೀಯ ನಾಯಕರ ಗಮನ ಸೆಳೆಯರು ಯತ್ನಾಳ್ ಇಂತಹ ಹೇಳಿಕೆ, ಟೀಕೆಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಈ ಟೀಕೆಗಳಿಗೆ ಗಮನಕೊಡುವ ಅಗತ್ಯವಿಲ್ಲ ಎಂದು ಹೇಳಿದರು.
ಇದೇ ವೇಳೆ, ಎಲ್ಲಾ ಕಾಂಗ್ರೆಸ್ ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚೆಚ್ಚು ಸ್ಥಾನಗಳ ಗೆಲ್ಲಲು ಶ್ರಮಿಸಬೇಕುಯ ಸಮೀಕ್ಷೆ ನಡೆಸಿದ ನಂತರ ಪಕ್ಷವು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ತಿಳಿಸಿದರು.
ಹಾಸನ ನಗರ ಪಾಲಿಕೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು, ಜಿಲ್ಲಾಡಳಿತ ಹಾಗೂ ನಗರ ಪಾಲಿಕೆ ಕಾಮಗಾರಿ ಕಾರ್ಯಗಳ ಆರಂಭಿಸಿದೆ ಎಂದು ಮಾಹಿತಿ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ