ಕಾಂಗ್ರೆಸ್ ಶಾಸಕರೇ ವಿರೋಧಿಸಿದ್ದರೂ ನೀರು ಬಿಡುತ್ತಿರುವುದೇಕೆ? ಬುದ್ದಿಜೀವಿಗಳು ಎಲ್ಲಿ: ಬಸನಗೌಡ ಯತ್ನಾಳ್ ಪ್ರಶ್ನೆ

ಸುಪ್ರೀಂ ಕೋರ್ಟ್‌ ಆದೇಶಕ್ಕೂ ಮುನ್ನ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಂಡ್ಯ ಭಾಗದಲ್ಲಿ ಪ್ರತಿಭಟನೆ ಕೂಡ ನಡೆಯುತ್ತಿವೆ.
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶಕ್ಕೂ ಮುನ್ನ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಂಡ್ಯ ಭಾಗದಲ್ಲಿ ಪ್ರತಿಭಟನೆ ಕೂಡ ನಡೆಯುತ್ತಿವೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅದರ ಜೊತೆಗೆ ಬುದ್ಧಿ ಜೀವಿಗಳು, ಹೋರಾಟಗಾರರು ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸುವುದಿಲ್ಲವಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸನಗೌಡ ಪಾಟೀಲ್‌ ಯತ್ನಾಳ್‌, ಬುದ್ದಿ ಜೀವಿಗಳು, ಹೋರಾಟಗಾರರು ಯಾರು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಪ್ರಶ್ನೆ ಮಾಡುವುದಿಲ್ಲವಾ? ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಹೆಚ್ಚುವರಿ ನೀರು ಹರಿಸುವ ಕಾರಣ ಏನು? ಎಂದು ನೇರವಾಗಿಯೇ ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಅದಲ್ಲದೇ, ಇದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹೊಂದಾಣಿಕೆಯಾ ಎಂದು ಪ್ರಶ್ನಿಸಿರುವ ಅವರು, ಮಂಡ್ಯ ಕಾಂಗ್ರೆಸ್ ಶಾಸಕರೇ ವಿರೋಧ ಮಾಡಿದ್ದರೂ ಈ ಭಂಡತನದ ನಿರ್ಧಾರಕ್ಕೆ ಕಾರಣ ಏನು? ಎಂದು ಸರ್ಕಾರವನ್ನು ಕೇಳಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com