ನಾವೇನಾದರೂ ಆಪರೇಷನ್‌ ಮಾಡಿದ್ರೆ ಮೇಲೇಳಲು ಆಗುವುದಿಲ್ಲ: ಕಾಂಗ್ರೆಸ್'ಗೆ ಸಿ.ಟಿ.ರವಿ ಎಚ್ಚರಿಕೆ

ನೀವು ಆಪರೇಷನ್ ಅಂತ ಕೈ ಹಾಕಿದರೆ, ನಾವು ಮುಟ್ಟಿ ನೋಡ್ಕೋಬೇಕು ಹಾಗೆ ಮಾಡುತ್ತೇವೆ ಎಂದು ಕಾಂಗ್ರೆಸ್‌ಗೆ ಮಾಜಿ ಶಾಸಕ ಸಿಟಿ ರವಿ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.
ಸಿ.ಟಿ.ರವಿ.
ಸಿ.ಟಿ.ರವಿ.

ಬೆಂಗಳೂರು: ನೀವು ಆಪರೇಷನ್ ಅಂತ ಕೈ ಹಾಕಿದರೆ, ನಾವು ಮುಟ್ಟಿ ನೋಡ್ಕೋಬೇಕು ಹಾಗೆ ಮಾಡುತ್ತೇವೆ ಎಂದು ಕಾಂಗ್ರೆಸ್‌ಗೆ ಮಾಜಿ ಶಾಸಕ ಸಿಟಿ ರವಿ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, " ಕಾಂಗ್ರೆಸ್‌ನವರೇ, ನಿಮಗೆ ನಮ್ಮವರನ್ನು ಕರೆದುಕೊಳ್ಳುವ ಅನಿವಾರ್ಯತೆ ಏನಿದೆ? ನೀವೇನಾದರೂ ಆಪರೇಷನ್ ಅಂತ ಕೈ ಹಾಕಿದ್ರೆ, ಮುಟ್ಟಿ ನೋಡ್ಕೋಬೇಕು ಹಾಗೆ ಮಾಡ್ತೇವೆ. ಒಂದು ವೇಳೆ ನಾವೇನಾದರೂ ಆಪರೇಷನ್‌ ಮಾಡಿದರೆ ನೀವು ಮೇಲೇಳಲೂ ಆಗಲ್ಲ ಎಂದು ಹೇಳಿದರು.

ಸದ್ಯ ನನಗಿರುವ ಮಾಹಿತಿಯಂತೆ ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗಲ್ಲ. ಅವರ ಹಿರಿಯ ಸಚಿವರು, ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಅವರಿಗೆ ಆಗುತ್ತಿಲ್ಲ. ಅವರು ಅತಿರೇಕಕ್ಕೆ ಕೈ ಹಾಕಿದರೆ ನಮಗೆ ಮುಂದೆ ಏನ್ ಮಾಡಬೇಕು ಎಂಬುದು ತಿಳಿದಿದೆ ಎಂದು ತಿಳಿಸಿದರು.

ಚೆಸ್ ಆಟ ಏಕಮುಖ ಅಲ್ಲ. ನಿಮ್ಮಿಂದ ನಮಗೆ ಚೆಕ್ ಮೆಟ್ ಕೊಡಲು ಬಂದರೆ, ನಮ್ಮಿಂದ ನಿಮಗೂ ಚೆಕ್ ಮೇಟ್ ಕೊಡಲು ಗೊತ್ತು. ನಾವು ಚೆಕ್ ಮೆಟ್‌ ಮಾಡಿದರೆ ಸಣ್ಣಪುಟ್ಟ ಸೈನಿಕರಿಗೆ ಮಾಡಲ್ಲ. ನೇರ ರಾಜನಿಗೇ ಚೆಕ್ ಮೆಟ್‌ ಮಾಡುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು.

ಎಸ್‌ಟಿ ಸೋಮಶೇಖರ್ ಅವರು ಹಿರಿಯ, ಅನುಭವಿ ಶಾಸಕರು. ಅವರಲ್ಲ, ಅವರ ಬೆಂಬಲಿಗರನ್ನು ಕಾಂಗ್ರೆಸ್‌ನವರು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಬಿಬಿಎಂಪಿ, ಸ್ಥಳೀಯ ಚುನಾವಣೆಗಳ ಆಸೆ ತೋರಿಸಿ ಸೆಳೆಯುತ್ತಿದ್ದಾರೆ. ಕಾಂಗ್ರೆಸ್‌ನವರು ಗೆದ್ದರು, ಅಧಿಕಾರಕ್ಕೆ ಏರಿದರು. ಒಂದು ಸ್ಥಿರವಾದ ಸರ್ಕಾರ ಕೊಡಲಿ. ಸ್ಪಷ್ಟ ಬಹುಮತ ಇದ್ದರೂ ಅತಿಯಾಗಿ ಮಾಡಲು ಹೋಗಬೇಡಿ. ನಾವೇನೂ ಸುಮ್ನೆ ಕೂರುವ ಜನ ಅಲ್ಲ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಡಿಸಿಎಂ ಹಾಗೂ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಬಿಜೆಪಿ ಮಾಡಿದರೆ ಸರಿಯೇ, ಕಾಂಗ್ರೆಸ್ ಮಾಡಿದರೆ ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ ಎಂದು ಹೇಳಿದ್ದಾರೆ.

ಆರ್‌ಡಿಪಿಆರ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ನಾಯಕತ್ವದ ಕೊರತೆಯಿಂದ ಬಿಜೆಪಿ ಮುಳುಗುತ್ತಿದೆ. ಇದೀಗ ಬಿಜೆಪಿಯನ್ನು ಬಿಎಸ್ ಯಡಿಯೂರಪ್ಪ ಅವರಿಂದಲೂ ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ, ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com