ಪತ್ರ ಬರೆದ ಕಾಂಗ್ರೆಸ್‌ ಶಾಸಕರನ್ನು ಹೆದರಿಸಲು ಆಪರೇಷನ್ ತಂತ್ರ; ನಾನು ಬೆಳಗಾವಿ ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ: ಬಾಲಚಂದ್ರ

ಮುಂಬರುವ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯೂ ಆಗಿಲ್ಲ.
ಬಾಲಚಂದ್ರ ಜಾರಕಿಹೊಳಿ
ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಮುಂಬರುವ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯೂ ಆಗಿಲ್ಲ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ, ಈ ಸಂಬಂಧ  ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಂಗಳವಾರ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ತಮ್ಮ ಕುಟುಂಬದ ಯಾರೊಬ್ಬರೂ ಸ್ಪರ್ಧಿಸುತ್ತಿಲ್ಲ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಅವರ ಗೆಲುವಿಗೆ ಶ್ರಮಿಸಲು ಸಿದ್ಧ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸಿನ ಮೇಲೆಯೇ ನಡೆಯುತ್ತದೆ. ಪಕ್ಷ ಯಾರಿಗೆ ಟಿಕೆಟ್‌ ನೀಡುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಲ್ಲಿನ ಬಣಗಳಿಂದಾಗಿ ಜನರು ನಮ್ಮ ವಿರುದ್ಧ ತೀರ್ಪು ನೀಡಿದ್ದಾರೆ. ಈಗ ಜಿಲ್ಲೆಯಲ್ಲಿ ಪಕ್ಷದಲ್ಲಿ ಯಾವುದೇ ಬಣಗಳು ಇಲ್ಲ.

ನಾವೆಲ್ಲರೂ ಒಂದಾಗಿಯೇ ಚುನಾವಣೆ ಎದುರಿಸುತ್ತೇವೆ. ಪಕ್ಷದ ಹೈಕಮಾಂಡ್‌ ಯಾರಿಗೆ ನಾಯಕತ್ವ ಜವಾಬ್ದಾರಿ ವಹಿಸುತ್ತದೆಯೋ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ಪಕ್ಷ ನಡೆಸಲಿರುವ ಆಪರೇಷನ್ ಹಸ್ತದ ಬಗ್ಗೆ ವರದಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ರಾಜ್ಯದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಅದನ್ನು ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.

ಅತೃಪ್ತಿಯಿಂದ ಪತ್ರ ಬರೆದಿರುವ (ಸಿಎಂಗೆ) ಕಾಂಗ್ರೆಸ್ ಶಾಸಕರನ್ನು ಹೆದರಿಸುವ ತಂತ್ರ ಇದಾಗಿದೆ, ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುವ ಸಾಧ್ಯತೆ ಇಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com