ಸಿದ್ದರಾಮಯ್ಯ, ಡಿಕೆಶಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರಾ ಅಥವಾ ಪ್ರತಿಸ್ಪರ್ಧಿಯಾಗಿ ಕೆಲಸ ಮಾಡುತ್ತಿದ್ದಾರಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಗಸ್ಟ್ 30 ಕ್ಕೆ 100 ದಿನಗಳನ್ನು ಪೂರೈಸಲಿದ್ದು, ಐದು ಭರವಸೆಗಳಲ್ಲಿ ನಾಲ್ಕನ್ನು ಸ್ವಲ್ಪಮಟ್ಟಿಗೆ ಜಾರಿಗೊಳಿಸಿದೆ, ಆದರೆ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ ಸಮನ್ವಯತೆ ಕೊರತೆಯ ಗುಸುಗುಸು ಇದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಗಸ್ಟ್ 30 ಕ್ಕೆ 100 ದಿನಗಳನ್ನು ಪೂರೈಸಲಿದ್ದು, ಐದು ಭರವಸೆಗಳಲ್ಲಿ ನಾಲ್ಕನ್ನು ಸ್ವಲ್ಪಮಟ್ಟಿಗೆ ಜಾರಿಗೊಳಿಸಿದೆ, ಆದರೆ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ ಸಮನ್ವಯತೆ ಕೊರತೆಯ ಗುಸುಗುಸು ಇದೆ. ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಶಿವಕುಮಾರ್ ಸಿದ್ದರಾಮಯ್ಯ ಅವರಿಗೆ ತೀವ್ರ ಪೈಪೋಟಿ ಒಡ್ಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಕುರಿತು ವಿಜ್ಞಾನಿಗಳನ್ನು ಅಭಿನಂದಿಸಲು ಸಿಎಂ ಮತ್ತು ಡಿಸಿಎಂ ಪ್ರತ್ಯೇಕವಾಗಿ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದರು. ಶಿವಕುಮಾರ್ ಅವರು ಮಹತ್ವದ ಘೋಷಣೆ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಹೇಳಿದರೆ, ಶೀಘ್ರದಲ್ಲೇ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ 500 ವಿಜ್ಞಾನಿಗಳನ್ನು ಸನ್ಮಾನಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಶಿವಕುಮಾರ್ ಬೇರೆ ಇಲಾಖೆಗಳಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತು ಮಧು ಬಂಗಾರಪ್ಪ ಅವರೊಂದಿಗೆ ಅವರು ಪ್ರತ್ಯೇಕವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸಿರುವ ಬಗ್ಗೆ ಸಿದ್ದರಾಮಯ್ಯ ಅವರಿಗೆ ದೂರು ನೀಡಲಾಗಿದ್ದು, ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.  ಸಿಎಂ ಮಾತ್ರ ಆ ಕೆಲಸ ಮಾಡಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ನಿದರ್ಶನವೆಂದರೆ, ಆಗಸ್ಟ್ 30 ರಂದು ‘ಗೃಹ ಲಕ್ಷ್ಮಿ’ ಖಾತರಿ ಯೋಜನೆಗೆ ಚಾಲನೆ ನೀಡುವ  ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಮೊದಲು ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಸಭೆ ನಡೆಸಿದ್ದರು. ರಾಜಕೀಯ ಪಂಡಿತರು ಈ ಘಟನೆಗಳನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ, ವಿಶೇಷವಾಗಿ ಹಿರಿಯ ನಾಯಕ ರಾಹುಲ್ ಗಾಂಧಿಯವರನ್ನೂ ಯೋಜನೆ ಚಾಲನೆಗೆ ಆಹ್ವಾನಿಸಿದ್ದಾರೆ.

“ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬೆಳಗಾವಿ ರಾಜಕೀಯದಲ್ಲಿ ಡಿಕೆಶಿ ಹಸ್ತಕ್ಷೇಪವು ಅದರ ಪತನಕ್ಕೆ ಕಾರಣವಾಯಿತು. ರಮೇಶ್ ಜಾರಕಿಹೊಳಿ ಆಪರೇಷನ್ ಕಮಲದ ನೇತೃತ್ವ ವಹಿಸಿದ್ದರಿಂದ ಎಸ್ ಟಿ ಸೋಮಶೇಖರ್ ಸೇರಿದಂತೆ ಸಿದ್ದರಾಮಯ್ಯ ಅವರ ಕೆಲವು ಬೆಂಬಲಿಗರು ಜಾರಕಿಹೊಳಿ  ಜೊತೆಗೆ ಬಿಜೆಪಿ ಸೇರಿದರು. 

ಈ ಅವಾಂತರಗಳ ನಡುವೆಯೂ ಸಿಎಂ ಮತ್ತು ಡಿಸಿಎಂ ಸಮನ್ವಯದಿಂದ ಸರ್ಕಾರ ನಡೆಸುತ್ತಿದ್ದಾರೆ ಎಂದು ಸಚಿವರಾದ ಎನ್ ಚೆಲುವರಾಯಸ್ವಾಮಿ ಮತ್ತು ಬಿ ನಾಗೇಂದ್ರ ಹೇಳಿದ್ದಾರೆ. ''ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಯಾವುದೇ ಪೈಪೋಟಿ ಅಥವಾ ಎದುರಾಳಿತನ ಇಲ್ಲ, ಕಾಂಗ್ರೆಸ್ ಸರಕಾರ ಯಶಸ್ವಿಯಾಗಿ 100 ದಿನಗಳನ್ನು ಪೂರೈಸುತ್ತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವುದರಿಂದ ವಿರೋಧ ಪಕ್ಷಗಳ ಆರೋಪಗಳು ಸುಳ್ಳು. ಯಾರೂ ಸಿಎಂ ಶಿಷ್ಟಾಚಾರವನ್ನು ಉಲ್ಲಂಘಿಸುವುದಿಲ್ಲ ಎಂದು ನಾಗೇಂದ್ರ ತಿಳಿಸಿದ್ದಾರೆ. 

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಎಲ್ಲವೂ ಸರಿಯಿಲ್ಲ ಎಂದು ಚುನಾವಣೆಗೆ ಮುನ್ನವೇ ಬಿಜೆಪಿ ಮತ್ತು ಜೆಡಿಎಸ್ ಹೇಳುತ್ತಿದ್ದವು, ಆದರೂ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ. ಅವರು ಇನ್ನೂ ಅಧಿಕಾರಕ್ಕೆ ಬರಲು ಯೋಚಿಸುತ್ತಿದ್ದಾರೆ, ಆದರೆ ನಾವು ಒಟ್ಟಿಗೆ ಇರುತ್ತೇವೆ ಮತ್ತು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಚೆಲುವರಾಯಸ್ವಾಮಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com