ಕಾಂಗ್ರೆಸ್​ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂದರೆ ಪರೋಕ್ಷವಾಗಿ ಸಿಎಂ ಅವರೇ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್​ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂದರೆ ಪರೋಕ್ಷವಾಗಿ ಸಿಎಂ ಅವರೇ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿದೆ.

ಕಾಂಗ್ರೆಸ್ ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ‌. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು.

ಅಂದು ಮೈಸೂರಿಗೆ ಬಂದಿಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.ಇಂದಿನಿಂದ 3 ದಿನ ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದೇನೆ. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ನಾಡಿದ್ದು 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸುವ ನಿರೀಕ್ಷೆ ಇದೆ. ಆ.30ರಂದು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com