ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸಲಿದೆ, ಜನಪರ ಆಡಳಿತ ನೀಡಲಿದೆ: ಸಲೀಂ ಅಹ್ಮದ್

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸ್ಥಿರತೆಯ ಪ್ರಶ್ನೆಗಳ ನಡುವೆ, ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಮತ್ತು ಸ್ಥಿರ, ಜನಪರ ಆಡಳಿತವನ್ನು ನೀಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳವಾರ ಹೇಳಿದ್ದಾರೆ.
ಸಲೀಂ ಅಹ್ಮದ್
ಸಲೀಂ ಅಹ್ಮದ್

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸ್ಥಿರತೆಯ ಪ್ರಶ್ನೆಗಳ ನಡುವೆ, ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಮತ್ತು ಸ್ಥಿರ, ಜನಪರ ಆಡಳಿತವನ್ನು ನೀಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಖಾತರಿ ಯೋಜನೆಗಳು ಪೂರ್ಣ ಅವಧಿಗೆ ಮುಂದುವರಿಯುತ್ತದೆ ಎಂದು ಅವರು ಭರವಸೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿರುವ ಸರ್ಕಾರದಿಂದ ಜನರು ಸಂತಸಗೊಂಡಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಸುಳ್ಳುಗಳನ್ನೇ ನಂಬಿಕೊಂಡಿದ್ದಾರೆ. ಅವರು ಪ್ರತಿ ವಿಚಾರಕ್ಕೂ ಸುಳ್ಳು ಹೇಳುತ್ತಲೇ ಬರುತ್ತಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸುತ್ತಿದ್ದು, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ. ನಾವು ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 100 ದಿನಗಳಲ್ಲಿಯೇ ಈಡೇರಿಸಿದ್ದೇವೆ. ಖಾತರಿಗಳನ್ನು ಹೇಗೆ ಜಾರಿಗೊಳಿಸುತ್ತೀರಿ ಎಂದು ವಿರೋಧ ಪಕ್ಷಗಳು ಟೀಕಿಸಿ, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದರು. ಆದರೆ, ನಾವು ಚುನಾವಣಾ ಪೂರ್ವದಲ್ಲಿ ನೀತಿದ್ದ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com