ಭಿನ್ನಮತೀಯರಿಗೆ ಬಿಜೆಪಿ ಹೈಕಮಾಂಡ್ ಮೊದಲ ಆದ್ಯತೆ: ನಂತರ ವಿಜಯೇಂದ್ರ, ಅಶೋಕ್ ಭೇಟಿ ಸಾಧ್ಯತೆ!

ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 3 ರಂದು (ಭಾನುವಾರ) ಪ್ರಕಟವಾಗಲಿದ್ದು, ಹೊಸದಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಬಿಜೆಪಿ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬವಾಗಲಿದೆ.
ಅಶೋಕ್ ಮತ್ತು ವಿಜಯೇಂದ್ರ
ಅಶೋಕ್ ಮತ್ತು ವಿಜಯೇಂದ್ರ
Updated on

ಬೆಂಗಳೂರು: ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 3 ರಂದು (ಭಾನುವಾರ) ಪ್ರಕಟವಾಗಲಿದ್ದು, ಹೊಸದಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಬಿಜೆಪಿ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬವಾಗಲಿದೆ.

ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಈ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಡಿ ನಡ್ಡಾ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯೋಜಿಸಿದ್ದರು.

"ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದರು ಮತ್ತು ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಮತ್ತು ಆದ್ದರಿಂದ ರಾಜ್ಯದ ಇಬ್ಬರು ನಾಯಕರನ್ನು ಭೇಟಿ ಮಾಡಲು  ಲಭ್ಯವಿಲ್ಲ ಎಂದು ಬಲ್ಲ ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದೆ.

ಇದೇ ವೇಳೆ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಸಮಾನ ಮನಸ್ಕ ಮುಖಂಡರು ಡಿ.7ರಿಂದ 9ರ ನಡುವೆ ಯಾವಾಗ ಬೇಕಾದರೂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

ಇದೇ ವೇಳೆ, ವೀರಶೈವ-ಲಿಂಗಾಯತ ಮುಖಂಡ ಸೋಮಣ್ಣ, ಅದೇ ಸಮುದಾಯದ ವಿಜಯೇಂದ್ರ ಅವರನ್ನು ದೂರವಿಟ್ಟು ಗುರುಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ರ್ಯಾಲಿ ನಡೆಸುತ್ತಿದ್ದಾರೆ.

ಹೈಕಮಾಂಡ್ ನಾಯಕರು ಭಿನ್ನಮತೀಯರನ್ನು ಭೇಟಿಯಾದ ನಂತರವೇ ವಿಜಯೇಂದ್ರ ಮತ್ತು ಅಶೋಕ ಅವರನ್ನು ಭೇಟಿ ಮಾಡುತ್ತಾರೆಯೇ ಎಂದು ನೋಡಬೇಕು. ಹೀಗಾದರೆ, ಇಬ್ಬರೂ ಡಿಸೆಂಬರ್ 9 ರ ನಂತರವಷ್ಟೇ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ" ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com