ತಾತ ಎಚ್.ಡಿ ದೇವೇಗೌಡರಿಗಾಗಿ ಹಾಸನ ಕ್ಷೇತ್ರ ಬಿಟ್ಟುಕೊಡಲು ಸಿದ್ಧ: ಪ್ರಜ್ವಲ್ ರೇವಣ್ಣ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದರೆ ಅವರ ಪರ ಪ್ರಚಾರ ಮಾಡಲು ಸಿದ್ಧ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Updated on

ಹಾಸನ: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದರೆ ಅವರ ಪರ ಪ್ರಚಾರ ಮಾಡಲು ಸಿದ್ಧ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಜ್ವಲ್, ತಾತನ ಶ್ರಮ ಹಾಗೂ ಆಶೀರ್ವಾದದಿಂದ ಸಂಸದನಾಗಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಯಾವುದೇ ಸಂದರ್ಭದಲ್ಲೂ ತಮ್ಮ ನಿರ್ಧಾರಕ್ಕೆ ಕಟ್ಟುನಿಟ್ಟಾಗಿ ಬದ್ಧರಾಗಿರುತ್ತೇನೆ, ಬೇಕಿದ್ದಲ್ಲಿ ಸಂಸದರಾಗಿರುವ ಹಾಸನ ಸ್ಥಾನವನ್ನೂ ತೆರವು ಮಾಡುವುದಾಗಿ ತಿಳಿಸಿದರು.

ಎರಡೂ ಪಕ್ಷಗಳ ಹಿರಿಯ ನಾಯಕರು ಪ್ರಾಮಾಣಿಕ ಪ್ರಯತ್ನ ಮಾಡಿದರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಹೇಳಿದರು. ಚುನಾವಣಾ ಆಯೋಗವು ಮಾರ್ಚ್‌ನಲ್ಲಿ 2024 ರ ಸಾರ್ವತ್ರಿಕ ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.  ಪಂಚರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಸಂಸತ್ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com