‘ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ’: ಬಿಜೆಪಿ ಶಾಸಕ ಬೊಮ್ಮಾಯಿ ಟೀಕೆ

ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ಇತರ ಎಲ್ಲ ಸಮುದಾಯಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾರಿ ಮಾಡಲು ಹೊರಟಿದ್ದಾರೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಟೀಕಿಸಿದ್ದಾರೆ.
ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ
ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ

ಬೆಳಗಾವಿ: ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ಇತರ ಎಲ್ಲ ಸಮುದಾಯಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾರಿ ಮಾಡಲು ಹೊರಟಿದ್ದಾರೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯವರು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣ ಮತ್ತು ಮತಬ್ಯಾಂಕ್‌ ರಾಜಕಾರಣಕ್ಕೆ ಉದಾಹರಣೆಯಾಗಿದೆ ಮುಖ್ಯಮಂತ್ರಿಯಾಗಿ ಎಲ್ಲರಿಗೂ ನ್ಯಾಯ ಕೊಡುವ ಕರ್ತವ್ಯವನ್ನು ಸಿದ್ದರಾಮಯ್ಯ ಮರೆತಿದ್ದಾರೆ’ ಎಂದು ಹೇಳಿದ್ದಾರೆ.

‘ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಫ್‌ ಮಂಡಳಿ, ಅಲ್ಪಸಂಖ್ಯಾತರ ನಿಗಮ, ಅಲ್ಪಸಂಖ್ಯಾತರ ಆಯೋಗದ ಮೂಲಕ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ. ಅವರೂ ಇತರ ಎಲ್ಲರಂತೆ ಶಿಕ್ಷಣ ಪಡೆದು ಸ್ವಾವಲಂಬಿ ಆಗಬೇಕು ಎಂಬ ಆಸೆ ಎಲ್ಲ ಸರ್ಕಾರಗಳಿಗೂ ಇದೆ. ಆದರೆ ಸಿದ್ದರಾಮಯ್ಯ ಸರ್ಕಾರ ಇತರ ಎಲ್ಲ ಸಮುದಾಯಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ.

"ಎಸ್‌ಸಿ/ಎಸ್‌ಟಿಗಳು, ಟಿಎಸ್‌ಪಿ ಮತ್ತು ಎಸ್‌ಸಿಪಿಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಲಾಗುತ್ತಿದೆ. ಆ ಮೂಲಕ ಎರಡು ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ" ಎಂದು ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com