ರಾಜ್ಯ ಬಿಜೆಪಿ, ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಾಭಿಪ್ರಾಯ!

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಲೋಕಸಭಾ ಚುನಾವಣಾ ಕಾರ್ಯತಂತ್ರವನ್ನು ಮರು ಪರಿಶೀಲಿಸುವ ಸಾಧ್ಯತೆಯಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಲೋಕಸಭಾ ಚುನಾವಣಾ ಕಾರ್ಯತಂತ್ರವನ್ನು ಮರು ಪರಿಶೀಲಿಸುವ ಸಾಧ್ಯತೆಯಿದೆ. 25 ಸ್ಥಾನ ಉಳಿಸಿಕೊಳ್ಳುವ ಗುರಿ ಹೊಂದಿರುವ ಬಿಜೆಪಿ ತನ್ನ ರಾಜ್ಯ ನಾಯಕರಲ್ಲಿ ಒಗ್ಗಟ್ಟು ಮೂಡಿಸಲು ಪ್ರಯತ್ನವನ್ನು ದ್ವಿಗುಣಗೊಳಿಸಬೇಕಾಗಿದೆ. ಆದರೆ ಕಾಂಗ್ರೆಸ್ ತನ್ನ ಪರವಾದ ಅಲೆ ಉಳಿಸಿಕೊಳ್ಳಲು ಗ್ಯಾರಂಟಿಗಳನ್ನು ಮೀರಿ ನೋಡಬೇಕಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ನಾಯಕರ ನಡುವೆ ಸರಿಯಾದ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಬಿಜೆಪಿ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕರು ಮತ್ತು ಅವರ ಸಹಚರರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವಾಗ ಪಕ್ಷದ ಶಾಸಕರು ಒಂದೇ ಕಡೆ ಇರಲಿಲ್ಲ.  ಇನ್ನುಳಿದ ಐದು ದಿನಗಳ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಹಿರಿಯ ಶಾಸಕರು ಹೇಗೆ ಉತ್ತಮ ಸಮನ್ವಯ ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ ನಂತರ ಮತ್ತು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ 3:1 ಫಲಿತಾಂಶಗ ಅದರ ನೈತಿಕತೆಯನ್ನು ಹೆಚ್ಚಿಸಿದ್ದು,  ಪಕ್ಷದ ಕಾರ್ಯಕರ್ತರು ಆತ್ಮವಿಶ್ವಾಸವನ್ನು ಮರಳಿ ಪಡೆಯುತ್ತಿದ್ದಾರೆ. ಆದರೆ ಹಿರಿಯ ನಾಯಕರಿಂದ ಬರುತ್ತಿರುವ ಅಪಸ್ವರಗಳು ಅಡ್ಡಿಯಾಗುತ್ತಲೇ ಇವೆ. ಅದನ್ನು ತ್ವರಿತವಾಗಿ ಪರಿಹರಿಸಲು ವಿಫಲವಾದರೆ ಲೋಕಸಭೆ ಚುನಾವಣೆಗೆ ಪಕ್ಷದ ಸಿದ್ಧತೆಯ ಮೇಲೆ ಪರಿಣಾಮ ಬೀರಬಹುದು.

ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ, ಅತೃಪ್ತ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸುಲಭದ ಕೆಲಸವಲ್ಲ, ಆದರೆ ಕೇಂದ್ರ ನಾಯಕತ್ವವು ಹೊಸ ರಾಜ್ಯಾಧ್ಯಕ್ಷರನ್ನು ಸಂಪೂರ್ಣವಾಗಿ ಬೆಂಬಲಿಸುವ ನಿರೀಕ್ಷೆಯಿದೆ. ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಏಕೈಕ ರಾಜ್ಯವಾಗಿದ್ದು ಅದು ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ. ವಿಜಯೇಂದ್ರ ನೇಮಕದ ನಂತರ ಕರ್ನಾಟಕದಲ್ಲಿ ರಚನೆಯಾಗಲಿರುವ ಹೊಸ ಪದಾಧಿಕಾರಿಗಳ ತಂಡವು ತಳಮಟ್ಟದಲ್ಲಿ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರ ಇಮೇಜ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅನುಭವದ ಮೇಲೆ ನಿಂತಿದೆ.

80 ವರ್ಷ ವಯಸ್ಸಿನ ಲಿಂಗಾಯತ ಪ್ರಬಲ ವ್ಯಕ್ತಿ ತನ್ನ ಸಾಂಪ್ರದಾಯಿಕ ಲಿಂಗಾಯತ ಬೆಂಬಲದ ನೆಲೆಯನ್ನು ಉಳಿಸಿಕೊಳ್ಳಲು ಪಕ್ಷಕ್ಕೆ ಸಹಾಯ ಮಾಡುವ ಮನವಿಯೊಂದಿಗೆ ಅವಿಶ್ರಾಂತ ಪ್ರಚಾರಕರಾಗಿದ್ದಾರೆ, ಇದು ತನ್ನ ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಲು ನಿರ್ಣಾಯಕವಾಗಿದೆ. ಅಲ್ಲದೆ, ಯಡಿಯೂರಪ್ಪನವರ ರಾಜಕೀಯವು ಮುಖ್ಯವಾಗಿ ಅವರ ಪಕ್ಷದಲ್ಲಿನ ಕಠಿಣ ಧ್ವನಿಗಳಿಗಿಂತ ಭಿನ್ನವಾಗಿ ಕೃಷಿ ಸಮಸ್ಯೆಗಳ ಸುತ್ತ ಸುತ್ತುತ್ತದೆ. ಜೆಡಿಎಸ್ ನೊಂದಿಗೆ ಹೊಂದಾಣಿಕೆ ಖಾತ್ರಿಪಡಿಸಿಕೊಳ್ಳುವ ಕಷ್ಟಕರವಾದ ಕೆಲಸವನ್ನು ಹೊಂದಿರುವ ಹೊಸ ತಂಡಕ್ಕೆ ಅವರ ರಾಜಕೀಯ ಚಾಣಾಕ್ಷತ ನೆರವಾಗುತ್ತದೆ. 2024 ರ ಲೋಕಸಭಾ ಚುನಾವಣೆಯು ಅವರ ಪುತ್ರ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವಕ್ಕೆ ಮೊದಲ ದೊಡ್ಡ ಪರೀಕ್ಷೆಯಾಗಿದೆ.

ಮತ್ತೊಂದೆಡ ಲೋಕಸಭೆ ಚುನಾವಣೆಯಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸಿಕೊಳ್ಳಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮೀರಿ ನೋಡುವ ಸಾಧ್ಯತೆಯಿದೆ. ಆದರೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವು ಅದರ ಕಾರ್ಯಕ್ಷಮತೆಗೆ ನಿರ್ಣಾಯಕವಾಗಿದೆ. ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರೂ, ಅದರ ಗೆಲುವಿಗೆ ಕೆಸಿ ಚಂದ್ರಶೇಖರ ರಾವ್ ಸರ್ಕಾರದ 10 ವರ್ಷಗಳ ಆಡಳಿತ ವಿರೋಧಿ ಅಲೆ ಮತ್ತು ಎ ರೇವಂತ್ ರೆಡ್ಡಿ ಸೇರಿದಂತೆ ಅದರ ಸ್ಥಳೀಯ ನಾಯಕರ ನೇತೃತ್ವದಲ್ಲಿ ಆಕ್ರಮಣಕಾರಿ ಪ್ರಚಾರ ಕಾರಣವಾಗಿದೆ. 

2014ರಲ್ಲಿ ರಾಜ್ಯ ರಚನೆಯಾದ ನಂತರ ಅಧಿಕಾರದಲ್ಲಿದ್ದ ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ರಾಜ್ಯದಲ್ಲಿ ಮೊದಲ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕರ್ನಾಟಕದ ಕಾಂಗ್ರೆಸ್ ನಾಯಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಸೆಂಬ್ಲಿ ಚುನಾವಣೆಗಿಂತ ಭಿನ್ನವಾಗಿ, ಲೋಕಸಭೆ ಚುನಾವಣೆಯಲ್ಲಿನ ವಿಷಯಗಳು ವಿಭಿನ್ನವಾಗಿರುತ್ತವೆ ಮತ್ತು ಇದು ರಾಷ್ಟ್ರೀಯ ವಿಷಯಗಳ ಸುತ್ತ ಕೇಂದ್ರೀಕೃತವಾಗಿರುತ್ತದೆ ಮತ್ತು ಮೋದಿ ಸರ್ಕಾರದ ಕಾರ್ಯಕ್ಷಮತೆ ಮತ್ತು ಪ್ರಬಲ ಪರ್ಯಾಯವನ್ನು ಯೋಜಿಸುವ ಪ್ರತಿಪಕ್ಷದ ಸಾಮರ್ಥ್ಯ ಲೆಕ್ಕಾಚಾರವಾಗಿರುತ್ತದೆ. 

ಆದರೆ, ಬಿಜೆಪಿಯಂತೆಯೇ ಕಾಂಗ್ರೆಸ್‌ಗೂ ಆಂತರಿಕ ಸಮಸ್ಯೆಗಳಿವೆ, ಏಕೆಂದರೆ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಅಭಿವೃದ್ಧಿಯ ವೇಗ ಕಾಯ್ದುಕೊಳ್ಳುವ ನಡುವೆ ಸಮತೋಲನ ಸಾಧಿಸಲು ಹೆಣಗಾಡುತ್ತಿದೆ. ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರ ನೇಮಕ ಕೆಲವು ಅತೃಪ್ತ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ, ಆದರೆ ಮೇಕೆದಾಟು ನಂತಹ ದೀರ್ಘಾವಧಿಯ ಯೋಜನೆಗಳಲ್ಲಿ ಪ್ರಗತಿಯನ್ನು ತೋರಿಸುವುದು ಸವಾಲಾಗಿ ಉಳಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಅಲ್ಪಸಂಖ್ಯಾತರ ಓಲೈಕೆ ಆರೋಪದ ಬಗ್ಗೆ ಕಾಂಗ್ರೆಸ್‌ನ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಿಧಿ ಹೆಚ್ಚಿಸುವ ಕುರಿತು ಸಿಎಂ ಇತ್ತೀಚೆಗೆ ನೀಡಿದ ಹೇಳಿಕೆಗಳ ಬಗ್ಗೆ ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಬಹುಸಂಖ್ಯಾತ ಸಮುದಾಯದ ಮತಗಳ ಕ್ರೋಢೀಕರಣದ ದೊಡ್ಡ ಕಾರ್ಯತಂತ್ರದೊಂದಿಗೆ ಪಕ್ಷವು ಸಿಎಂ ಅವರನ್ನು ಬ್ರಾಂಡ್ ಮಾಡುವ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಸೂಚಿಸುತ್ತದೆ. ಸದ್ಯಕ್ಕೆ, ಎರಡೂ ಪಕ್ಷಗಳು ತಮ್ಮ ಆಂತರಿಕ ಸಮಸ್ಯೆಗಳನ್ನು ಪರಿಹರಿಸಲು ನೋಡುತ್ತಿದ್ದು, ಡಿಸೆಂಬರ್ 15 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಲೋಕಸಭೆ ಚುನಾವಣೆ ಸಿದ್ಧತೆಗೆ ಧುಮುಕುತ್ತವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com