ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಲಾಭ: ಕ್ರಿಶನ್ ಪಾಲ್ ಗುರ್ಜರ್

ಕಾಂಗ್ರೆಸ್ ಮತ್ತು ಅದರ ದುಷ್ಕೃತ್ಯಗಳನ್ನು ಜನರಿಗೆ ತಿಳಿಯುವಂತೆ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದ್ದಾರೆ.
ಕ್ರಿಶನ್ ಪಾಲ್ ಗುರ್ಜರ್
ಕ್ರಿಶನ್ ಪಾಲ್ ಗುರ್ಜರ್
Updated on

ಬೆಂಗಳೂರು: ಕಾಂಗ್ರೆಸ್ ಮತ್ತು ಅದರ ದುಷ್ಕೃತ್ಯಗಳನ್ನು ಜನರಿಗೆ ತಿಳಿಯುವಂತೆ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಗುರ್ಜರ್, ಹೊಸ ಮೈತ್ರಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಬಲ ನೀಡಲಿದೆ, ಹೀಗಾಗಿ ಬಿಜೆಪಿ ಕರ್ನಾಟಕದಲ್ಲಿ ಗರಿಷ್ಠ ಸ್ಥಾನಗಳನ್ನು ಗಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಶೇಕಡಾ 41 ರಷ್ಟು ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ಪುನರಾವರ್ತಿಸುತ್ತದೆ" ಎಂದು ಅವರು ಹೇಳಿದರು. ದಕ್ಷಿಣ ರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಹೆಚ್ಚಿಸಿಕೊಂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಭಾರತ ಸರ್ಕಾರವು ಪ್ರಾರಂಭಿಸಿದ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಕೇಂದ್ರ ಸರ್ಕಾರವು ದೇಶಾದ್ಯಂತ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಗ್ರಾಮೀಣ ಜೀವನೋಪಾಯ ಕಾರ್ಯಕ್ರಮಗಳ ಮೂಲಕ ಬಡವರನ್ನು ಮುಖ್ಯವಾಹಿನಿಗೆ ತರಲು ಮೋದಿ ಖಾತರಿಗಳನ್ನು ಜನರ ಬಳಿಗೆ ಕೊಂಡೊಯ್ಯಲಾಗುವುದು ಎಂದು ಗುಜ್ಜರ್ ಹೇಳಿದರು.

ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯು ದೇಶಾದ್ಯಂತ 2.7 ಲಕ್ಷ ಪಂಚಾಯತ್‌ಗಳಲ್ಲಿ ಪ್ರವಾಸ ಮಾಡಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ದೇಶದ ಜಿಡಿಪಿ ಮತ್ತಷ್ಟು ಹೆಚ್ಚಿದ್ದು, ಆರ್ಥಿಕತೆಯು ಸರಿಯಾದ ದಿಕ್ಕಿನಲ್ಲಿದೆ ಮತ್ತು ಸಮೃದ್ಧಿಯ ಹಾದಿಯಲ್ಲಿದೆ ಎಂದು ಸೂಚಿಸುತ್ತದೆ ಎಂದಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿನ ಆಂತರಿಕ ಕಚ್ಚಾಟವನ್ನು ಲೇವಡಿ ಮಾಡಿದ ಅವರು, ಪಕ್ಷದ ಭಾರತ್ ಜೋಡೋ ಅಭಿಯಾನವು ಕಾಂಗ್ರೆಸ್ಸಿಗರನ್ನು ಒಗ್ಗೂಡಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com