ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಡಿಕೆ ಶಿವಕುಮಾರ್

ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿರುವ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

146 ಸಂಸದರನ್ನು ಅಮಾನತುಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರವನ್ನು ತೋರಿಸಿರುವ ಬಿಜೆಪಿ ಮೂರು ರಾಜ್ಯಗಳಲ್ಲಿ  ಗೆದ್ದ ಸೊಕ್ಕಿನಲ್ಲಿದೆ. ದೇಶದ ಜನರು ನೋಡುತ್ತಿದ್ದು, ತಕ್ಕ ಪಾಠ ಕಲಿಸುತ್ತಾರೆ. ರಾಜ್ಯ ಚುನಾವಣೆಗಳು ಮತ್ತು ಸಾರ್ವತ್ರಿಕ ಚುನಾವಣೆಗಳಿಗೆ ಜನರು ವಿಭಿನ್ನವಾಗಿ ಮತ ಚಲಾಯಿಸಿದ ಅನೇಕ ನಿದರ್ಶನಗಳಿವೆ. ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ, ವಿಧಾನಸಭೆ ಚುನಾವಣೆಯ ಎರಡು ತಿಂಗಳ ನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನರು ವಿಭಿನ್ನವಾಗಿ ಮತ ಚಲಾಯಿಸಿದ್ದರು ಎಂದು  ಹೇಳಿದರು.

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ವಿಸ್ತೃತ ಚರ್ಚೆಗೆ ಒತ್ತಾಯಿಸಿದ ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಲಾಗಿದೆ. ನಾವು ಈ ಹೋರಾಟವನ್ನು ಜನರ ಬಳಿಗೆ ಕೊಂಡೊಯ್ಯಬೇಕು. ಬಿಜೆಪಿಯವರು ಪ್ರಜಾಪ್ರಭುತ್ವವನ್ನು ಹೇಗೆ ಕೊಲ್ಲುತ್ತಿದ್ದಾರೆ ಎಂಬುದನ್ನು ಅವರಿಗೆ ಹೇಳಬೇಕಾಗಿದೆ. ನಮ್ಮ ಪ್ರಗತಿಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ನಮ್ಮ ಭರವಸೆ ಜನರಿಗೆ ತಲುಪಿದೆಯೇ ಎಂದು ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಶೇ.98ಕ್ಕೂ ಹೆಚ್ಚು ಫಲಾನುಭವಿಗಳು ಸವಲತ್ತು ಪಡೆದಿದ್ದಾರೆ,'' ಎಂದು ಹೇಳಿದರು.

ನೀರಿನ ದರ ಏರಿಕೆ: ನೀರಿನ ದರ ಏರಿಕೆ ಪ್ರಸ್ತಾವನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, 2018ರಲ್ಲಿ ವಸತಿ ಕಟ್ಟಡಗಳಿಗೆ ಅದೇ ರೀತಿ ಹೆಚ್ಚಿಸುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ, ಆದ್ದರಿಂದ ವಾಣಿಜ್ಯ ಕಟ್ಟಡಗಳ ನೀರಿನ ದರವನ್ನು ಹೆಚ್ಚಿಸಲಾಗಿದೆ. ಕಳೆದ 10 ವರ್ಷಗಳಿಂದ ವಸತಿ ವಿಭಾಗದ ಸುಂಕವನ್ನು ಹೆಚ್ಚಿಸಿಲ್ಲ ಎಂದು ಅವರು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ 'ಅಜಿತ್ ಪವಾರ್', 'ಏಕನಾಥ್ ಶಿಂಧೆ' ಇದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅಧಿಕಾರದಲ್ಲಿರುವುದನ್ನು ಜೆಡಿಎಸ್ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಅವರು ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com