ನಾವು ಟಿಪ್ಪು ಸುಲ್ತಾನ್ ಪರ ಎನ್ನುತ್ತಿದ್ದವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು: ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್ ಕಿಡಿ

ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು.
ಬಿಕೆ ಹರಿಪ್ರಸಾದ್
ಬಿಕೆ ಹರಿಪ್ರಸಾದ್
Updated on

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು.

ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಪಕ್ಷದ ಧ್ಯೇಯವಾಗಿದೆ. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣಬೇಕು.  ಶಾಲಾ ಕಾರೇಜುಗಳಲ್ಲಿ ಸಮಾನತೆ ತರಬೇಕು ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಸಮಾಜದಲ್ಲಿ ಸಮಾನತೆ ಬಗ್ಗೆ ಅವರು ಮಾತನಾಡುವುದಿಲ್ಲ ಎಂದು ದೂರಿದರು.

ಮಹಿಳಾ ಕುಸ್ತಿಪಟುಗಳು ಕಣ್ಣೀರು ಹಾಕಿದರೂ ಅವರು ತಲೆಕೆಡಿಸಿಕೊಂಡಿಲ್ಲ. ಅವರು ಮೊದಲು ತಮ್ಮ ಹುಳುಕುಗಳನ್ನು ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.

ಹಿಜಾಬ್ ವಿಷಯ ಸುಪ್ರೀಂ ಕೋರ್ಟ್‌ ಅಂಗಳದಲ್ಲಿದೆ. ತೀರ್ಪು ಬಂದ ನಂತರ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ. ಹಿಜಾಬ್ ಮತ್ತು ಬುರ್ಖಾಗೆ ವ್ಯತ್ಯಾಸ ಇದೆ. ಶಾಲೆ, ಕಾಲೇಜಿನ ಕಾಂಪೌಂಡ್‌ವರೆಗೂ ಬುರ್ಖಾ ಧರಸಿ ಬರಬಹುದು. ನಂ ತರ ಹಿಜಾಬ್ ಧರಿಬಹುದು ಎಂಬುದು ನನ್ನ ಅಭಿಪ್ರಾಯ ಎಂದರು.

ಬಹುಸಂಖ್ಯಾತರ ತುಷ್ಟೀಕರಣ ಮಾಡಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಹಿಂಸೆ, ಸುಳ್ಳು ಹರಡುತ್ತಿದೆ. ಅಲ್ಪಸಂಖ್ಯಾತರು, ಮೀಸಲಾತಿ ವಿರುದ್ಧ ಮಾತನಾಡುವವರು ಆ ಪಕ್ಷದಲ್ಲೇ ಇದ್ದಾರೆ. ನಾಗ್ಪುರದಲ್ಲಿರುವ ಇದರ ಸೂತ್ರದಾರರು ಜಾತಿ ಜನಗಣತಿ ವಿರುದ್ಧ ಮಾತನಾಡಿದರು. ಜನರಿಂದ ವಿರೋಧ ವ್ಯಕ್ತವಾದ್ದರಿಂದ ಈಗ ಸುಮ್ಮನಾಗಿದ್ದಾರೆ ಎಂದು ಹೇಳಿದರು.

ಟಿಕೆಟ್ ಆಕಾಂಕ್ಷಿ

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನೂ ಆಕಾಂಕ್ಷಿಯಾಗಿದ್ದೇನೆ. ಆದರೆ, ಯಾರು ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆ ಬಗೆಹರಿಯಬೇಕು. ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬರುತ್ತಿರುವುದು ಸಂತಸದ ವಿಚಾರ ಎಂದರು.

ಈಚೆಗೆ ನಡೆದ ಈಡಿಗ ಸಮಾಜದ ಸಮಾವೇಶದಿಂದ ನನ್ನನ್ನು ಯಾರೂ ದೂರ ಇಟ್ಟಿಲ್ಲ. ನಾನು ಎಂದೂ ಜಾತಿ ರಾಜಕಾರಣ ಮಾಡಿಲ್ಲ. ಜಾತ್ಯತೀತ ತತ್ವದಲ್ಲಿ ನಂಬಿಕೆ ಇದೆ. ಹೀಗಾಗಿ ಸಮಾವೇಶಕ್ಕೆ ನನ್ನನ್ನು ಕರೆದರೂ ನಾನೇ ದೂರವಿದ್ದೆ. ಹಿಂದುಳಿದ ವರ್ಗಗಳ 197 ಕಾಯಕ ಸಮಾಜಗಳಲ್ಲಿ ಕೆಲವೇ ಸಮಾಜಗಳನ್ನು ಹೊರತುಪಡಿಸಿದರೆ ಉಳಿದವರಿಗೆ ಕನಿಷ್ಠ ಸರ್ಕಾರಿ ನೌಕರಿಯೂ ಸಿಕ್ಕಿಲ್ಲ. ಅವರ ಪರ ಹೋರಾಟ ಆಗಬೇಕು. ಧ್ವನಿ ಇಲ್ಲದವರ ಪರವಾಗಿ ಸಮಾವೇಶ ಮಾಡಬೇಕು ಎಂಬ ತೀರ್ಮಾನ ಕೈಗೊಂಡಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com