ಅದೊಂದು ಕಾರಣಕ್ಕೆ ಸಿಎಂ ಆಗಿ ಮುಂದುವರಿಯಲು ಅವಕಾಶ ನೀಡಲಿಲ್ಲ; ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ

ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಯಿಂದಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಲಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.
ಡಿವಿ ಸದಾನಂದ ಗೌಡ
ಡಿವಿ ಸದಾನಂದ ಗೌಡ

ದಕ್ಷಿಣ ಕನ್ನಡ: ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಯಿಂದಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಲಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.

ಡಿಸೆಂಬರ್ 26 ರಂದು ಕಡಬದಲ್ಲಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ಮತ್ತು ಒಕ್ಕಲಿಗ ಮುಖಂಡರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ ಅವರನ್ನು ಒಳಗೊಂಡ ಮಹತ್ವದ ಕಾರ್ಯಕ್ರಮವನ್ನು ನೆನಪಿಸಿಕೊಂಡರು.

ಆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದವೇ ನನಗೆ ಮುಖ್ಯಮಂತ್ರಿಯಾಗಲು ದಾರಿ ಮಾಡಿಕೊಟ್ಟಿತು ಎಂದು ಪ್ರತಿಪಾದಿಸಿದ್ದೆ, ಆ ಕಾರಣದಿಂದ ನಾನು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದೇನೆ ಎಂದು ಹೇಳಿದರು.

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಸದಾನಂದ ಗೌಡರು, ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ದೃಢಪಡಿಸಿದರು. ಆದರೂ, ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಹೇಳಿದರು. ಪಕ್ಷವು ಒದಗಿಸಿದ ಅವಕಾಶಗಳನ್ನು ಗುರುತಿಸುವ ಸಂದರ್ಭದಲ್ಲಿ, ಅವರು ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಟೀಕಿಸಿದರು. ಸಮಕಾಲೀನ ರಾಜಕೀಯದ ರಾಜಿ ಸ್ವಭಾವದ ಬಗ್ಗೆ ವಿಷಾದಿಸಿದರು.

ಗುಂಪುಗಾರಿಕೆಯ ವ್ಯಾಪಕತೆ, ಹೆಚ್ಚಿರುವ ಅಹಂ ಮತ್ತು ಸಮಗ್ರತೆಯ ಕೊರತೆಯನ್ನು ಎತ್ತಿತೋರಿಸಿದ ಅವರು, ಈ ಸವಾಲುಗಳ ಹೊರತಾಗಿಯೂ, ತಾವು ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ನಂಬಿಕೆಯಿಟ್ಟಿರುವುದಾಗಿ ತಿಳಿಸಿದರು. ಇತರರಿಗೆ ಹೋಲಿಸಿದರೆ ತಮ್ಮ ಪಕ್ಷವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ತಾವು ಪಕ್ಷಕ್ಕಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com