ಬ್ಯಾರಿಕೆಡ್ ವೀರ ಪ್ರತಾಪ್ ಸಿಂಹ, ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ? ಕಾಂಗ್ರೆಸ್

ಮರಗಳ್ಳತನ ಪ್ರಕರಣದಲ್ಲಿ ವಿಕ್ರಮ್ ಸಿಂಹ ಬಂಧನ ವಿಚಾರವಾಗಿ ಮೈಸೂರು ಸಂಸದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ಪ್ರತಾಪ್ ಸಿಂಹ
ಪ್ರತಾಪ್ ಸಿಂಹ

ಬೆಂಗಳೂರು: ಮರಗಳ್ಳತನ ಪ್ರಕರಣದಲ್ಲಿ ವಿಕ್ರಮ್ ಸಿಂಹ ಬಂಧನ ವಿಚಾರವಾಗಿ ಮೈಸೂರು ಸಂಸದ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಭಾವ ಬೀರಿದ ಮಾತ್ರಕ್ಕೆ ಸಂಸತ್ ದಾಳಿಕೋರರಿಗೆ ಪಾಸ್ ನೀಡಿದ ಪ್ರಕರಣದಿಂದ ತಪ್ಪಿಸಿಕೊಳ್ಳಬಹುದು ಎಂದು ನಂಬಿದ್ದೀರಿ, ಆದರೆ ನಿಮ್ಮ ಸಹೋದರನ ಮರಗಳ್ಳತನದ ದಂಧೆಯಲ್ಲಿ ಕಾನೂನಿನ ಕುಣಿಕೆಯಿಂದ ತಪ್ಪಿಸಲಾರಿರಿ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಯಾವುದೇ ಅಂಜಿಕೆ ಇಲ್ಲದೆ ಕಡಿದು ಕಳ್ಳಸಾಗಣೆಗೆ ಮುಂದಾಗಿದ್ದು ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು?ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ  ಎಂದು ಪ್ರಶ್ನಿಸಿದೆ.

ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ಗುರು ಮೋದಿಯಂತೆಯೇ ನಾನಾ ಬಗೆಯ ನಾಟಕವಾಡುವ @mepratap ಅವರೇ,

ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ, ಅವರಿಗೂ ನಿಮಗೂ ಇರುವ ಸಂಬಂಧವೇನು ಎಂಬ ಸರಳ ಪ್ರಶ್ನೆಗಳಿಗೆ ಉತ್ತರಿಸಲು ಭಯ ಪಡುವುದೇಕೆ?

ಈಗ ಇನ್ನೊಂದಿಷ್ಟು ಪ್ರಶ್ನೆಗಳು ಉದ್ಭವಿಸಿವೆ, ನಿಮ್ಮ ಸಹೋದರನ ಮರಗಳ್ಳತನದ ದಂಧೆಯಲ್ಲಿ…

— Karnataka Congress (@INCKarnataka) December 30, 2023

ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ.ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ ತಪ್ಪೇ ಮಾಡಿಲ್ಲ ಎನ್ನುತ್ತಿದ್ದ ಪ್ರತಾಪ್ ಸಿಂಹ ಅವರೇ, ನಿಮ್ಮ ತಮ್ಮ ತಲೆಮರೆಸಿಕೊಂಡಿದ್ದೇಕೆ? ಈಗ ಬಂಧನವಾಗಿದ್ದೇಕೆ? ಕಾಡುಗಳ್ಳ ವೀರಪ್ಪನ್ ಸ್ಥಾನ ತುಂಬುವಂತೆ ನಿಮ್ಮ ಸಹೋದರನನ್ನು ತಯಾರು ಮಾಡುತ್ತಿದ್ರಾ? ಎಂದು ಪ್ರಶ್ನೆಗಳ ಸರಣಿಯನ್ನೆ ಮುಂದಿಡಲಾಗಿದೆ.

ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ಗುರು ಮೋದಿಯಂತೆಯೇ ನಾನಾ ಬಗೆಯ ನಾಟಕವಾಡುವ ಪ್ರತಾಪ್ ಸಿಂಹ ಅವರೇ, ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ, ಅವರಿಗೂ ನಿಮಗೂ ಇರುವ ಸಂಬಂಧವೇನು ಎಂಬ ಸರಳ ಪ್ರಶ್ನೆಗಳಿಗೆ ಉತ್ತರಿಸಲು ಭಯ ಪಡುವುದೇಕೆ? ನಿಮ್ಮ ಸಹೋದರನ ಮರಗಳ್ಳತನದ ದಂಧೆಯಲ್ಲಿ ನಿಮ್ಮ ಪಾಲೂ ಇದೆಯೇ? ತಮ್ಮನ ಕಳ್ಳದಂಧೆಯನ್ನು ಪ್ರಭಾವ ಬೀರಿ ರಕ್ಷಿಸುತ್ತಿದ್ದಿದ್ದು ನೀವೇನಾ? ಈ ಕಳ್ಳದಂಧೆಯನ್ನು ಎಷ್ಟು ವರ್ಷಗಳಿಂದ ಮಾಡಿಕೊಂಡು ಬಂದಿದ್ದೀರಿ? ಇನ್ನೂ ಅದೆಷ್ಟು ಮರಗಳ ಮಾರಣಹೋಮ ನಡೆಸಿದ್ದೀರಿ? ಅಂದಹಾಗೆ,ಬೆತ್ತಲೆ ಜಗತ್ತಿನಲ್ಲಿ ಈ ಎಲ್ಲಾ ಸಂಗತಿಗಳ ಬಗ್ಗೆ ಬರೆಯುವುದು ಯಾವಾಗ? ಅಂತಾ ವಾಗ್ದಾಳಿ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com