ಕುತೂಹಲ ಕೆರಳಿಸಿದ ಡಿಕೆಶಿ-ಚಂದ್ರಬಾಬು ನಾಯ್ಡು ಭೇಟಿ: ಆಂಧ್ರಪ್ರದೇಶದಲ್ಲೂ ಶುರುವಾಯಿತೇ ತಂತ್ರಗಾರಿಕೆ?

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು
ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ನೆರೆಯ ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ತೆಲಂಗಾಣ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಘೋಷಿಸಿ, ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಆಂಧ್ರಪ್ರದೇಶದಲ್ಲೂ ಅದೇ ತಂತ್ರಗಾರಿಕೆಯನ್ನು ಹೆಣೆಯುವ ಸಿದ್ಧತೆಗಳ ಕುರಿತು ಊಹಾಪೋಹಗಳು ಶುರುವಾಗಿದೆ.

ಡಿಕೆ ಶಿವಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬೆಂಗಳೂರು ಹಾಗೂ ಕುಪ್ಪಂನಲ್ಲಿ ಸರಣಿ ಕಾರ್ಯಕ್ರಮಗಳಿಗೆ ತೆರಳುವ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಭೇಟಿಯಾದರು.

ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಗಾಗಿ ನಾಗ್ಪುರಕ್ಕೆ ವಿಮಾನದಲ್ಲಿ ತೆರಳಲಿದ್ದರು.

ಈ ವೇಳೆ ಆಗ ಹತ್ತಿರ ಬಂದ ಇಬ್ಬರು ನಾಯಕರು ಕೈಕುಲುಕಿದರು. ನಾಯ್ಡು ಅವರು ನಾಯ್ಡು ಅವರನ್ನು ತೋಳು ಹಿಡಿದು ಪಕ್ಕಕ್ಕೆ ಎಳೆದರು, ಭದ್ರತಾ ಸಿಬ್ಬಂದಿ ಸೇರಿದಂತೆ ಅವರ ಜೊತೆಗಿದ್ದವರಿಂದ ದೂರ ಹೋದರು. ಬಳಿಕ ಇಬ್ಬರು ನಾಯಕರು ಕೆಲವು ನಿಮಿಷಗಳ ಕಾಲ ಮಾತನಾಡಿದರು. ಡಿಕೆ ಶಿವಕುಮಾರ್ ಹೆಚ್ಚಾಗಿ ಮಾತನಾಡಿದರು. ನಾಯ್ಡು ಗಮನವಿಟ್ಟು ಕೇಳಿಸಿಕೊಂಡು ತಲೆದೂಗುವ ಮೂಲಕ ಸರಿ ಎನ್ನವಂತೆ ಹೇಳುತ್ತಿರುವುದು ಕಂಡು ಬಂದಿತು.

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾವುದೇ ನಾಯಕರು ಗೆಲವು ಸಾಧಿಸಿ ಶಾಸಕರಾಗಿಲ್ಲ. ಹೀಗಾಗಿ ಟಿಡಿಪಿಯೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ತೆಲಂಗಾಣದಲ್ಲಿ ನಡೆದ ಚುನಾವಣೆಯಲ್ಲಿ ಟಿಡಿಪಿ ಸ್ಪರ್ಧೆಗಿಳಿದಿರಲಿಲ್ಲ. ಇದು ಕಾಂಗ್ರೆಸ್ ಗೆಲುವಿಗೆ ಕಾರಣವಾಗಿತ್ತು.

ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್ ರಾಜಶೇಖರ್ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಟಿಡಿಪಿ ಪಕ್ಷದ ನೇತೃತ್ವ ವಹಿಸಿದ್ದು, ಚುನಾವಣೆಗೆ ಪಕ್ಷ ಸ್ಪರ್ಧಿಸಿರುವಂತೆ ಮಾಡುವಲ್ಲಿ ಡಿಕೆ.ಶಿವಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇದೇ ರೀತಿಯಲ್ಲಿಯೇ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ತಂತ್ರವನ್ನೂ ಡಿಕೆ.ಶಿವಕುಮಾರ್ ಅವರು ರೂಪಿಸಬಹುದು ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com