ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ; ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು: ವಿ.ಸೋಮಣ್ಣ

ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ  ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ.
ವಿ. ಸೋಮಣ್ಣ
ವಿ. ಸೋಮಣ್ಣ

ಬೆಂಗಳೂರು: ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ  ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಅನ್ಯಾಯ ಆಗಿದೆ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ಗೋವಿಂದರಾಜನಗರ ಕ್ಷೇತ್ರ ಬಿಡಬಾರದಿತ್ತು. ಆಗ ಯಾರಾದ್ರು ನನಗೆ ಮಾಟ ಮಂತ್ರ ಮಾಡಿಸಿದ್ದರೇನೋ, ಕ್ಷೇತ್ರ ಬಿಟ್ಟೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಜನವರಿ 9ಕ್ಕೆ ದೆಹಲಿಯಲ್ಲಿ ವರಿಷ್ಠರ ಭೇಟಿ ಆಗುತ್ತೇನೆ, ನನಗೆ ಆದ ಅನ್ಯಾಯವನ್ನ ವರಿಷ್ಠರ ಬಳಿ ಹೇಳುತ್ತೇನೆ. ನರೇಂದ್ರ ಮೋದಿ  ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ.

ವಿಜಯನಗರದ ‌ಕಚೇರಿಯಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ಕ್ಯಾಲೆಂಡರ್ ಬಿಡುಗಡೆ ಮತ್ತು ಕುವೆಂಪು ಜಯಂತಿ ‌ಆಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡಿದ ಸೋಮಣ್ಣ ಅವರು ನನಗೆ ಆಗಿರುವ ಅನಾನುಕೂಲ ಯಾರಿಗೂ ಆಗುವುದು ಬೇಡ. ಹೊಸ ವರ್ಷ ಆರಂಭವಾಗುತ್ತಿದೆ. ಹಳೆಯ ಕಹಿ ಘಟನೆ ಮರೆತು ಮುಂದೆ ಹೊಸ ವರ್ಷದಲ್ಲಿ ಮುನ್ನೆಡೆಯೋಣ ಎಂದರು.

ನಮ್ಮ ಮೇಲೆ ಪ್ರಹಾರ ಆಗದಂತೆ‌ ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ರಾಷ್ಟ್ರೀಯ ನಾಯಕರ ನಿಲುವೇ ನನ್ನ ನಿಲುವು. ನನ್ನ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ. ರಾಷ್ಟ್ರೀಯ ನಾಯಕರು ಏನು ಹೇಳುತ್ತಾರೋ ಹಾಗೆಯೇ ನಡೆದುಕೊಳ್ಳುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಪಕ್ಷ ಬಿಡುವುದಿಲ್ಲ ಎಂಬ ಸಂದೇಶವನ್ನು ಸೋಮಣ್ಣ ರವಾನೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com