ಲೋಕಸಭೆ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ವಿಚಾರ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಬಿಟ್ಟದ್ದು: ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸಚಿವರು ಸ್ಪರ್ಧಿಸುವ ಬಗ್ಗೆ ರಾಜ್ಯದ ನಾಯಕರು ನಿರ್ಧರಿಸುತ್ತಾರೆ ಎಂದು ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸಚಿವರು ಸ್ಪರ್ಧಿಸುವ ಬಗ್ಗೆ ರಾಜ್ಯದ ನಾಯಕರು ನಿರ್ಧರಿಸುತ್ತಾರೆ ಎಂದು ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

ರಾಜ್ಯದಲ್ಲಿ ಕೆಲವು ಸಚಿವರನ್ನು ಲೋಕಸಭೆ ಚುನಾವಣೆ ಅಖಾಡಕ್ಕೆ ಇಳಿಸಲಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ನೀವು ಈ ಬಗ್ಗೆ ಇಲ್ಲಿನ ನಾಯಕರನ್ನು ಕೇಳಬೇಕು. ಇಲ್ಲಿ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬುದನ್ನು ರಾಜ್ಯ ಚುನಾವಣಾ ಸಮಿತಿ ನೋಡುತ್ತದೆ ಎಂದು ಹೇಳಿದರು.

ರಾಜ್ಯ ಚುನಾವಣಾ ಸಮಿತಿಯ ಅಭಿಪ್ರಾಯದ ಬಳಿಕ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮುಂದಿನ ನಿರ್ಧಾರ ಆಗುತ್ತದೆ. ಯಾರು ಸ್ಪರ್ಧೆ ಮಾಡಬೇಕು, ಯಾರು ಮಾಡಬಾರದು ಎಂಬುದನ್ನು ರಾಜ್ಯ ಚುನಾವಣಾ ಸಮಿತಿ ನಿರ್ಧಾರ ಮಾಡಿದ ಬಳಿಕ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಗೆ ಬರುತ್ತದೆ. ಆಗ ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ನಿಗಮ - ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, ನಿಗಮ-ಮಂಡಳಿ ನೇಮಕಾತಿಯನ್ನು ಆದಷ್ಟು ಬೇಗ ಮಾಡುತ್ತೇವೆ ಎಂದರು,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com