ಮಂಚ ಮುರಿಯೋದೇ ಅಚ್ಚೇ ದಿನವಾ? ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿರೋದು ಸಾಕಾ? ನಿಮ್ಮ ಬಾಯಾಗ ಮಣ್ಣು ಹಾಕಾ?

ರಾಜ್ಯದಲ್ಲಿ ಬಿಜೆಪಿ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರಕಾರ ರಚಿಸಿದ್ದು ಇವರಿಗೆ ನಾಚಿಕೆ ಆಗಬೇಕು. ಹೀಗಾಗಿ ಕೂಡಲೇ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಕೊಟ್ಟು ಹೊರಗಡೆ ಬರಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದ್ದಾರೆ.
ಸಿ.ಎಂ ಇಬ್ರಾಹಿಂ
ಸಿ.ಎಂ ಇಬ್ರಾಹಿಂ
Updated on

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ 13 ಜನರನ್ನು ಮಂಚದ ಮೇಲೆ ಮಲಗಿಸಿ ಸರಕಾರ ರಚಿಸಿದ್ದು ಇವರಿಗೆ ನಾಚಿಕೆ ಆಗಬೇಕು. ಹೀಗಾಗಿ ಕೂಡಲೇ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಕೊಟ್ಟು ಹೊರಗಡೆ ಬರಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿರೋದು ಸಾಕಾ? ನಿಮ್ಮ ಬಾಯಾಗ ಮಣ್ಣು ಹಾಕಾ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ. ರಾಷ್ಟ್ರೀಯ ಯೋಜನೆ ಅಂತ ಮಾಡಿ ಕೇವಲ 5200 ಕೋಟಿ ರೂಪಾಯಿ ಕೊಟ್ಟಿದ್ದಾರೆ. ದೇವೇಗೌಡರಿದ್ದಾಗ 18 ಸಾವಿರ ಕೋಟಿ ರೂಪಾಯಿ ಕೊಡಿಸಿದ್ದರು. ನಿಮ್ಮ ಕೈಯಲ್ಲಿ ಜಿ.ಎಸ್.ಟಿ. ದುಡ್ಡು ಕೊಡಿಸೋಕೆ ಆಗಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿಯವರೇ ಮಂಚ ಮುರಿಯೋದು ಅಚ್ಛೇ ದಿನಾ ನಾ? ಇದಕ್ಕೆ ಪ್ರಧಾನಿ ಮೋದಿ ಉತ್ತರ ಕೊಡಬೇಕು. ಪಿಟೀಲು ಬಾರಿಸುತ್ತಿರುವ ನಳಿನ್ ಕುಮಾರ್ ಕಟೀಲ್ ರಸ್ತೆ ಬೇಡಾ ಲವ್ ಜಿಹಾದ್ ಬಗ್ಗೆ ಮಾತಾಡಿ ಎನ್ನುತ್ತಿದ್ದಾರೆ. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಕೊಡಿಸಲಾಗಿದೆ. ಇದರ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದೆ. ಕಾಂಗ್ರೆಸ್ ಬಿಜೆಪಿಯ ಚಿಕ್ಕಪ್ಪನ ಮಕ್ಕಳು. ನಮಗೆ ಬಿ ಟೀಂ ಅಂತಾರೆ. ನಮ್ಮ ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಬೈರತಿ ಬಸವರಾಜ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರ್ತಿದಾನೆ. ಇದರ ಅರ್ಥವೇನು ಎಂದು ಪ್ರಶ್ನಿಸಿದ್ದಾರೆ.

ರಾಜೀನಾಮೆ ಕೊಟ್ಟು ಬಂದ 13 ಜನರು ದರಿದ್ರರು, ಬಿಜೆಪಿಯಲ್ಲಿ ದರಿದ್ರ ಗ್ರಹಗಳು ಸೇರಿಕೊಂಡಿವೆ. ಅವುಗಳನ್ನು ಜನರೇ ತೆಗೆದುಹಾಕಬೇಕು. ದೇವೆಗೌಡರು ರಾಜಕೀಯದಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com