ಅಜ್ಮೇರ್‌ ದರ್ಗಾಕ್ಕೆ ಚಾದರ ನೀಡುವ ಮೂಲಕ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವ ಬಿಜೆಪಿ-ಕಾಂಗ್ರೆಸ್ ನಾಯಕರು

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೆಲ ಮುಖಂಡರು ಅಜ್ಮೇರ್ ದರ್ಗಾಕ್ಕೆ ಚಾದರ ನೀಡುವುದು, ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್ ನೀಡುವುದು ಮತ್ತಿತರ ಕೆಲಸಗಳ ಮೂಲಕ ಅಲ್ಪಸಂಖ್ಯಾತ ಸಮುದಾಯದವರನ್ನು ಒಲೈಕೆಯಲ್ಲಿ ತೊಡಗಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ಎಂಎಲ್ಎ ಉದಯ್ ಗರುಡಾಚಾರ್ (ಬಲಗಡೆಯಿಂದ ಮೂರನೇಯವರು) ಅಜ್ಮೇರ್ ದರ್ಗಾಕ್ಕೆ ಚಾದರ ಅರ್ಪಿಸಿದರು.
ಇತ್ತೀಚೆಗಷ್ಟೇ ಬಿಜೆಪಿ ಎಂಎಲ್ಎ ಉದಯ್ ಗರುಡಾಚಾರ್ (ಬಲಗಡೆಯಿಂದ ಮೂರನೇಯವರು) ಅಜ್ಮೇರ್ ದರ್ಗಾಕ್ಕೆ ಚಾದರ ಅರ್ಪಿಸಿದರು.

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೆಲ ಮುಖಂಡರು ಅಜ್ಮೇರ್ ದರ್ಗಾಕ್ಕೆ ಚಾದರ ನೀಡುವುದು, ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್ ನೀಡುವುದು ಮತ್ತಿತರ ಕೆಲಸಗಳ ಮೂಲಕ ಅಲ್ಪಸಂಖ್ಯಾತ ಸಮುದಾಯದವರನ್ನು ಒಲೈಕೆಯಲ್ಲಿ ತೊಡಗಿದ್ದಾರೆ.

ಇತ್ತೀಚೆಗೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ 811ನೇ ಉರುಸ್‌ನಲ್ಲಿ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾಕ್ಕೆ ಚಾದರ ಅರ್ಪಿಸಿದರು. ನಗರದ ಚಾಮರಾಜಪೇಟೆಯ ಐತಿಹಾಸಿಕ ಹಜರತ್ ಸಯ್ಯದ್ ಸಫ್ದರ್ ಅಲಿ ಶಾ ಖಾದ್ರಿ ಹಾಗೂ ಹಜರತ್ ಶಂಶೀರ್ ಅಲಿ ಶಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿ ಅಜ್ಮೇರ್ ದರ್ಗಾಕ್ಕೆ ಚಾದರ ಅರ್ಪಿಸಿದರು. 

ಜಯನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಕೆ.ರಾಮಮೂರ್ತಿ ಮಾತನಾಡಿ, ಅಜ್ಮೇರ್ ದರ್ಗಾಕ್ಕೆ ಚಾದರ ಮಾತ್ರ ನೀಡಿಲ್ಲ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಲ್ಯಾಣ ಕಾರ್ಯಕ್ರಮಗಳ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿಗೆ ಆಟೋರಿಕ್ಷಾಗಳ ವ್ಯವಸ್ಥೆ ಮಾಡಿದೆ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಸಹ ನೀಡಲಾಗಿದೆ ಎಂದರು.

ಬೊಮ್ಮನಹಳ್ಳಿಯ ಮೂರು ಬಾರಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮಾತನಾಡಿ, ತಾವು ಕೆಲವು ಮಸೀದಿಗಳಿಗೆ ಸಂಬಂಧಿಸಿದ ಭೂ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಸಹಾಯ ಮಾಡಿದ್ದೇನೆ. ಇಲ್ಲಿನ 28 ಮಸೀದಿ ಸಮಿತಿಗಳಿಂದ ನನಗೆ ಬೆಂಬಲವಿದೆ. ನನ್ನ ವಿಧಾನಸಭಾ ಕ್ಷೇತ್ರದಿಂದ ಸೈಯದ್ ಸಲಾಂ ಅವರಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಮಾತನಾಡಿ, ನಾನು ಹೊಲಿಗೆ ಯಂತ್ರ, ಆಟೋರಿಕ್ಷಾ ಮತ್ತು ಸ್ಕಾಲರ್‌ಶಿಪ್‌ಗಳನ್ನು ಮುಸ್ಲಿಮರಿಗೆ ಮಾತ್ರವಲ್ಲದೆ ಎಲ್ಲಾ ಸಮುದಾಯಗಳಿಗೆ ನೀಡಿದ್ದೇನೆ ಎಂದಿದ್ದಾರೆ.

ಎರಡು ಬಾರಿ ಶಾಸಕರಾಗಿರುವ ಮತ್ತು ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ನಾಯಕಿ ಪ್ರಿಯಾ ಕೃಷ್ಣ ಮಾತನಾಡಿ, 'ನಾನು ಅಧಿಕಾರದಲ್ಲಿಲ್ಲದಿದ್ದರೂ, ಮಕ್ಕಳ ಶಾಲಾ ಶುಲ್ಕದಂತಹ ಸಹಾಯಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ ಮತ್ತು ನಾನು ಅವರಿಗೆ ಸಹಾಯ ಮಾಡುತ್ತೇನೆ. ನಮ್ಮ ತಂಡವು ಆಟೋರಿಕ್ಷಾಗಳನ್ನು ಖರೀದಿಸಲು ಜನರಿಗೆ ಸಹಾಯ ಮಾಡಿದೆ. ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಇವು ಕೇವಲ ಚುನಾವಣಾ ಸಮಯದಲ್ಲಿ ಮಾತ್ರವಲ್ಲ, ನಾವು ಇದನ್ನು ಬಹಳ ಹಿಂದಿನಿಂದಲೂ ಮಾಡುತ್ತಿದ್ದೇವೆ' ಎಂದು ಅವರು ಹೇಳಿದರು.

ಅಬಕಾರಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ.ಗೋಪಾಲಯ್ಯ ಅವರು, ತಮ್ಮ ಕ್ಷೇತ್ರದಲ್ಲಿ ಸಮಾಜದ ಎಲ್ಲ ವರ್ಗದವರ ಬಗ್ಗೆ ಕಾಳಜಿ ವಹಿಸುವುದಾಗಿ ಹೇಳಿದ್ದು, 'ನಾನು ಎಲ್ಲ ವರ್ಗಗಳಿಗೂ ಸಹಾಯ ಮಾಡಿದ್ದೇನೆ. ಮಾರಪ್ಪನಪಾಳ್ಯ ವಾರ್ಡ್‌ನ ಕೃಷ್ಣಾನಂದ ನಗರದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಿರುವ ಕಾರಣ ಅವರಿಗಾಗಿ ಶಾಲೆಯನ್ನು ಅಭಿವೃದ್ಧಿಪಡಿಸುತ್ತಿದ್ದೇನೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com