ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತತ್ತರಿಸಿದ ಬಿಜೆಪಿ, ಸೋಷಿಯಲ್ ಮೀಡಿಯಾದಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ

ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಾಗಿರುವ ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡಿದ ಹೇಳಿಕೆ ಆಡಳಿತ ಪಕ್ಷವನ್ನು ಕೊಂಚಮಟ್ಟಿಗೆ ಅಲ್ಲೋಲಕಲ್ಲೋಲ ಮಾಡಿರುವುದಂತೂ ಸತ್ಯ.
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಾಗಿರುವ ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡಿದ ಹೇಳಿಕೆ ಆಡಳಿತ ಪಕ್ಷವನ್ನು ಕೊಂಚಮಟ್ಟಿಗೆ ಅಲ್ಲೋಲಕಲ್ಲೋಲ ಮಾಡಿರುವುದಂತೂ ಸತ್ಯ. ಅವರ ಹೇಳಿಕೆಯಿಂದ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷಕ್ಕೆ ಆಗಿರುವ ಹಾನಿಯನ್ನು ನಿಯಂತ್ರಿಸಲು ಬಿಜೆಪಿಯಲ್ಲಿ ನಾಯಕರ ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಕುಮಾರಸ್ವಾಮಿಯವರ ಹೇಳಿಕೆಗಳು ತಮ್ಮ ಚುನಾವಣಾ ಭವಿಷ್ಯಕ್ಕೆ ಹೆಚ್ಚು ಹಾನಿಯನ್ನುಂಟು ಮಾಡಿದೆ ಎಂದು ಆಡಳಿತ ಪಕ್ಷವು ಭಾವಿಸುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜನರ ಬೆಂಬಲ ಕಡಿಮೆಯಾಗದಂತೆ ನೋಡಿಕೊಳ್ಳಲು ನಿರ್ದಿಷ್ಟ ಕಾರ್ಯತಂತ್ರಗಳನ್ನು ರೂಪಿಸಿದೆ. 

ಅದಕ್ಕೆ ಬಿಜೆಪಿ ಹೂಡಿರುವ ತಂತ್ರ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿಯನ್ನು ಅವಹೇಳನ ಮಾಡುವ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ಪಕ್ಷದ ಬಗ್ಗೆ ವಿರೋಧ ಪಕ್ಷದವರು ಏನು ಹೇಳುತ್ತಿದ್ದಾರೆ ಎಂಬುದನ್ನು ಓದುಗರು ನಂಬಬೇಡಿ ಎಂದು ಒತ್ತಾಯಿಸಿದ್ದಾರೆ. ಈ ಎಲ್ಲಾ ಸಂದೇಶಗಳ ಸಾಮಾನ್ಯ ಗುರಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ.

ಸಾಮಾಜಿಕ ಮಾಧ್ಯಮಗಳಲ್ಲಿನ ಸಂದೇಶಗಳು ಕುಮಾರಸ್ವಾಮಿಯವರ ತಂದೆ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಸಹೋದರ ಎಚ್‌ಡಿ ರೇವಣ್ಣ ಅವರ ಹೀನಾಯ ಸ್ಥಿತಿಯನ್ನು ಎತ್ತಿತೋರಿಸುತ್ತಿದೆ. ಕುಮಾರಸ್ವಾಮಿಯವರ ಹೇಳಿಕೆಯು ಬಿಜೆಪಿಯನ್ನು ಅಗಾಧವಾಗಿ ಬೆಂಬಲಿಸಿರುವ ಲಿಂಗಾಯತ ಮತದಾರರಿಗೆ ನಷ್ಟವಾಗಬಹುದು ಎಂದು ಆಡಳಿತ ಪಕ್ಷದ ನಾಯಕರು ಭಾವಿಸುತ್ತಿದ್ದಾರೆ. 

ಇನ್ನು ರಾಜ್ಯದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮತದಾರರು ಕೂಡ ಬಿಜೆಪಿಯಿಂದ ಹಿಂದೆ ಸರಿಯಬಹುದು ಎಂದು ರಾಜಕೀಯ ನಾಯಕರು ವಿಶ್ಲೇಷಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿಡಲು ಬಿಜೆಪಿ ಜಾಗ್ರತವಾಗಿದೆ ಎಂದು ಹೇಳಲಾಗುತ್ತಿದೆ. 

2008 ಮತ್ತು 2018ರ ಚುನಾವಣೆಗಳಲ್ಲಿ ಲಿಂಗಾಯತರು ಪಕ್ಷಕ್ಕೆ ಮತ ಹಾಕಿದ್ದರಿಂದ ಬಿಜೆಪಿ ಹಲವು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಎರಡೂ ಸಂದರ್ಭಗಳಲ್ಲಿ ಸಮುದಾಯದ ಪ್ರಬಲ ವ್ಯಕ್ತಿ ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಯಿತು. ಆದರೆ ಪ್ರಲ್ಹಾದ್ ಜೋಶಿ ಸಿಎಂ ಅಭ್ಯರ್ಥಿ ಎಂಬ ಕುಮಾರಸ್ವಾಮಿ ಹೇಳಿಕೆ ಮತದಾರರಲ್ಲಿ ಅಸಮಾಧಾನ ಮೂಡಿಸಿದೆ. ಹೇಳಿಕೆ ನೀಡುವವರೆಗೂ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಲಿಂಗಾಯತರಾದ ಬೊಮ್ಮಾಯಿ ಅವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಭಾವಿಸಲಾಗಿತ್ತು.

ರಾಜಕೀಯ ವಿಶ್ಲೇಷಕ ಬಿ.ಎಸ್.ಮೂರ್ತಿ, ಸೋಷಿಯಲ್ ಮೀಡಿಯಾಗಳನ್ನು ಅಸ್ತ್ರ ಮಾಡಿಕೊಂಡಿರುವ ಏಕೈಕ ಪಕ್ಷ ಬಿಜೆಪಿ. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ಈ ತೀಕ್ಷ ಪ್ರತಿಕ್ರಿಯೆ ಕುಮಾರಸ್ವಾಮಿ ಹೇಳಿಕೆ ತಮ್ಮ ಮೇಲೆ ತೀವ್ರ ಪರಿಣಾಮ ಬೀರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 

ಬಿಜೆಪಿಯ ರಕ್ಷಣೆಗೆ ಹಲವು ಪ್ರಮುಖರು ಧಾವಿಸಿದ್ದಾರೆ. ಪೇಜಾವರದಂತಹ ಪ್ರತಿಷ್ಠಿತ ಮಠಗಳ ಸ್ವಾಮೀಜಿಗಳು, ಪ್ರಮುಖ ವ್ಯಕ್ತಿಗಳು ಮತ್ತು ಸಿ.ಟಿ.ರವಿ, ಗೋವಿಂದ ಕಾರಜೋಳ, ರವಿಕುಮಾರ್, ಚಲುವಾದಿ ನಾರಾಯಣಸ್ವಾಮಿ ಮುಂತಾದ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಟೀಕಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com